ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ಇಂತಹ ಘಟನೆಗಳು ಎಲ್ಲೂ ಕೂಡ ಜರುಗಬಾರದು. ಮಹಾಕುಂಭಮೇಳಕ್ಕೆ ನಮ್ಮ ರಾಜ್ಯದಿಂದ ಎಷ್ಟು ಜನ ಅಲ್ಲಿಗೆ ಹೋಗಿದ್ದಾರೆ ಎಂದು ಗೊತ್ತಿಲ್ಲ. ಆದರೆ ರಾಜ್ಯ ಸರ್ಕಾರ ಅಲ್ಲಿಗೆ ಹೋಗಿರುವ ಜನರ ಸಂಪರ್ಕದಲ್ಲಿದೆ. ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರ ಶ್ರಮವಹಿಸಲಿದೆ ಎಂದರು.