ಚಾಮುಂಡಿ ಬೆಟ್ಟದ ನಂದಿಗೆ ನೆರವೇರಿದ ಮಹಾ ಮಸ್ತಾಭಿಷೇಕ

ಮೈಸೂರು: ಭಾರತದ ಮೂರನೇ ಅತಿದೊಡ್ಡ ನಂದಿ ವಿಗ್ರಹ ಎಂಬ ಖ್ಯಾತಿಗೆ ಒಳಗಾಗಿರುವ ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿಸಲಾಯಿತು.

ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್‌ ಟ್ರಸ್ಟ್‌ನಿಂದ ಇಂದು 19ನೇ ವರ್ಷದ ಮಹಾಮಸ್ತಾಭಿಷೇಕ ನೆರವೇರಿದ್ದು, ಅಭಿಷೇಕದಲ್ಲಿ ನಂದಿ ವಿಗ್ರಹಕ್ಕೆ 34 ಬಗೆಯ ದ್ರವ್ಯಗಳು ಸೇರಿದಂತೆ 38 ವಿಧಗಳಲ್ಲಿ ಅಭಿಷೇಕ ನೆರವೇರಿಸಲಾಯಿತು.

ಈ ನಂದಿ ವಿಗ್ರಹವು 1659 ರಿಂದ 1673ರವರೆಗೆ ಮೈಸೂರು ಸಂಸ್ಥಾನವನ್ನಾಳಿದ ದೊಡ್ಡ ದೇವರಾಜ ಒಡೆಯರ್‌ ಕಾಲದಲ್ಲಿ ನಿರ್ಮಾಣವಾಗಿದ್ದು, 350ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿದೆ.

ಇದನ್ನು ಚಾಮುಂಡಿ ಬೆಟ್ಟವನ್ನು ಕಾಲ್ನಡಿಗೆಯ ಮೂಲಕ ಹತ್ತುವಾಗ 700 ಮೆಟ್ಟಿಲುಗಳ ಬಳಿ ಏಕಶಿಲಾ ಮೂರ್ತಿಯನ್ನಾಗಿ ಕೆತ್ತನೆ ಮಾಡಲಾಗಿದೆ. ಅಲ್ಲದೇ ಈ ವಿಗ್ರಹವು 16 ಅಡಿ ಎತ್ತರ ಹಾಗೂ 25 ಅಡಿ ಉದ್ದವಿದೆ.

ಚಾಮುಂಡಿ ಬೆಟ್ಟದಲ್ಲಿರುವ ಈ ನಂದಿ ವಿಗ್ರಹವು ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ದೇವಾಲಯದ ನಂದಿ ಹಾಗೂ ಆಂಧ್ರ ಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನದ ನಂದಿಯನ್ನು ಬಿಟ್ಟರೆ, ಇದೇ ದೇಶದ ಮೂರನೇ ನಂದಿ ವಿಗ್ರಹವಾಗಿದೆ.

ಅರ್ಚನ ಎಸ್‌ ಎಸ್

Recent Posts

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

10 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

13 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

50 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

1 hour ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

1 hour ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

2 hours ago