Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಮಹಿಷಾ ದಸರಾ: ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ, ಬನ್ನಿ ನೋಡೆ ಬಿಡೋಣ ಎಂದ ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ನಗರದಲ್ಲಿ ಮಹಿಷ ದಸರಾ ಆಚರಣೆ ಪ್ರಯುಕ್ತ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಯೋಜನಾ ತಯಾರಿ ಮಾಡಲಾಗುತ್ತಿದೆ. ಈ ಮಧ್ಯೆ ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸವಾಲು ಎಸೆದಿದ್ದಾರೆ.

ಈಗಾಗಲೇ ಮಾಜಿ ಸಂಸದ ಪ್ರತಾಪ್‌ ಸಿಂಹ ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಕಳೆದ ವರ್ಷ ಸಂಸದರಾಗಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮತ್ತೊಮ್ಮೆ ಮಹಿಷನ ಪುಷ್ಪಾರ್ಚನೆ ವಿಚಾರವಾಗಿ ತಮ್ಮ ಎಕ್ಸ್‌ ಖಾತೆಯಲ್ಲಿ ಪತ್ರಿಕಾ ವರದಿ ಉಲ್ಲೇಖಿಸಿ ಪೋಸ್ಟ್‌ ಹಂಚಿಕೊಂಡು ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಕಿಡಿಕಾರಿದ್ದಾರೆ.

ಮಹಿಷ ದಸರಾ ಹೆಸರಿನಲ್ಲಿ ಚಾಮುಂಡೇಶ್ವರಿ ತಾಯಿಗೆ ನಿಂದಿಸುತ್ತಾರೆ. ಹೀಗಾಗಿ ಇದಕ್ಕೆ ಅವಕಾಶ ಮಾಡಿಕೊಡಬಾರದು. ಇಲ್ಲಿಯವರೆಗೂ ಮಹಿಷ ದಸರಾ ಆಚರಣೆಗೆ ಒಮ್ಮೆ ಮಾತ್ರ ಪುಷ್ಪಾರ್ಚನೆಗೆ ಅವಕಾಶ ನೀಡಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಚಾಮುಂಡಿ ತಾಯಿಗೆ ನಿಂದಿಸಿದ್ದರಿಂದ ಆಕ್ಷೇಪ ವ್ಯಕ್ತವಾಗಿ ಇಲ್ಲಿಯವರೆಗೂ ಬೆಟ್ಟದಲ್ಲಿ ಪುಷ್ಪಾರ್ಚನೆಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಮಹಿಷ ದಸರಾ ಆಚರಣೆಯಲ್ಲಿ ಪುಷ್ಪಾರ್ಚನೆಗೆ ಅವಕಾಶ ನೀಡಿದರೆ ಚಾಮುಂಡಿ ಚಲೋ ಮಾಡುವುದಾಗಿ ಪ್ರತಾಪ್‌ ಸಿಂಹ ಸವಾಲು ಹಾಕಿದ್ದಾರೆ.

Tags: