ಮೈಸೂರು: ನಗರದಲ್ಲಿ ಮಹಿಷ ದಸರಾ ಆಚರಣೆ ಪ್ರಯುಕ್ತ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಯೋಜನಾ ತಯಾರಿ ಮಾಡಲಾಗುತ್ತಿದೆ. ಈ ಮಧ್ಯೆ ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸವಾಲು ಎಸೆದಿದ್ದಾರೆ.
ಈಗಾಗಲೇ ಮಾಜಿ ಸಂಸದ ಪ್ರತಾಪ್ ಸಿಂಹ ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಕಳೆದ ವರ್ಷ ಸಂಸದರಾಗಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮತ್ತೊಮ್ಮೆ ಮಹಿಷನ ಪುಷ್ಪಾರ್ಚನೆ ವಿಚಾರವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪತ್ರಿಕಾ ವರದಿ ಉಲ್ಲೇಖಿಸಿ ಪೋಸ್ಟ್ ಹಂಚಿಕೊಂಡು ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಕಿಡಿಕಾರಿದ್ದಾರೆ.
ಮಹಿಷ ದಸರಾ ಹೆಸರಿನಲ್ಲಿ ಚಾಮುಂಡೇಶ್ವರಿ ತಾಯಿಗೆ ನಿಂದಿಸುತ್ತಾರೆ. ಹೀಗಾಗಿ ಇದಕ್ಕೆ ಅವಕಾಶ ಮಾಡಿಕೊಡಬಾರದು. ಇಲ್ಲಿಯವರೆಗೂ ಮಹಿಷ ದಸರಾ ಆಚರಣೆಗೆ ಒಮ್ಮೆ ಮಾತ್ರ ಪುಷ್ಪಾರ್ಚನೆಗೆ ಅವಕಾಶ ನೀಡಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಚಾಮುಂಡಿ ತಾಯಿಗೆ ನಿಂದಿಸಿದ್ದರಿಂದ ಆಕ್ಷೇಪ ವ್ಯಕ್ತವಾಗಿ ಇಲ್ಲಿಯವರೆಗೂ ಬೆಟ್ಟದಲ್ಲಿ ಪುಷ್ಪಾರ್ಚನೆಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಮಹಿಷ ದಸರಾ ಆಚರಣೆಯಲ್ಲಿ ಪುಷ್ಪಾರ್ಚನೆಗೆ ಅವಕಾಶ ನೀಡಿದರೆ ಚಾಮುಂಡಿ ಚಲೋ ಮಾಡುವುದಾಗಿ ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…