Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಹಿಷ ದಸರಾ ಆಚರಣೆ ವಿಚಾರಕ್ಕೆ ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ

ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಜನರ ಧಾರ್ಮಿಕ ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಹೀಗಾಗಿ ಮಹಿಷಾ ದಸರಾವನ್ನು ಆಚರಿಸುವಾಗ ಯಾರಿಗೂ ಯಾವುದೇ ರೀತಿಯ ಹಾನಿಯಾಗದೇ ಮತ್ತು ತೊಂದರೆಯಾಗದೇ ಇರುವಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬಹುದು ಎಂದರು.

ಇದೇ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದಲ್ಲಿರುವ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದು ತಾಯಿ ಚಾಮುಂಡೇಶ್ವರಿ ಇರುವ ಕ್ಷೇತ್ರ, ಅಲ್ಲಿ ಯಾಕೆ? ಎಂದು ಪ್ರಶ್ನೆ ಮಾಡಿದರು. ಮಹಿಷಾ ದಸರಾ ಆಚರಣೆ ಬಗ್ಗೆ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಲಿ. ಆದರೆ, ಧರ್ಮದಲ್ಲಿ ಪದ್ಧತಿ ಏನಿದೆ, ನಂಬಿಕೆ ಏನಿದೆ ಎಂಬುದನ್ನು ನಾವು ಅನುಸರಿಸುತ್ತೇವೆ. ಅದಕ್ಕೆ ಧಕ್ಕೆ ಬರಬಾರದು. ಪ್ರಜೆಗಳ ಪ್ರತಿನಿಧಿಗಳಾದ ನಾವು ಜವಾಬ್ದಾರಿಯುತವಾಗಿ ಅಧಿಕಾರಿಗಳಿಗೆ ಚಾಮುಂಡಿ ಬೆಟ್ಟದಲ್ಲಿ ಏನು ಪರಂಪರೆ ಹಾಗೂ ನಮ್ಮ ನಂಬಿಕೆ ಏನು ಇದೆ ಎಂಬುದನ್ನು ವ್ಯಕ್ತಪಡಿಸಿದ್ದೇವೆ ಎಂದು ಹೇಳಿದರು.

 

Tags: