ಮೈಸೂರು: ಮಹಿಷ ಮಂಡಲೋತ್ಸವ ಸಮಿತಿ ವತಿಯಿಂದ ಇಂದು ಮೈಸೂರಿನ ಪುರಭವನದ ಆವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.
ಪುರಭವನದ ಆವರಣದಲ್ಲಿ ಬುದ್ಧ, ಅಂಬೇಡ್ಕರ್ ಹಾಗೂ ಮಹಿಷಾಸುರನ ಪಂಚಲೋಹದ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದನ್ನು ಓದಿ : ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಹಿನ್ನೆಲೆ: ಮಹಿಷನ ಪ್ರತಿಮೆ ಸುತ್ತಮುತ್ತ ನಿಷೇಧಾಜ್ಞೆ
ಕಾರ್ಯಕ್ರಮದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ, ಕೊಳತ್ತೂರು ಟಿ.ಎಸ್.ಮಣಿ, ಪ್ರೊಫೆಸರ್ ಕೆ.ಎಸ್.ಭಗವಾನ್, ಇತಿಹಾಸ ತಜ್ಞ ಪಿ.ವಿ.ನಂಜರಾಜ ಅರಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಕಾರ್ಯಕ್ರಮ ನಡೆದ ಪುರಭವನದ ಸುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಯನ್ನು ಕೂಡ ನಿಯೋಜನೆ ಮಾಡಲಾಗಿತ್ತು.





