ಮೈಸೂರು: ಯಾವುದೇ ಕಾರಣಕ್ಕೂ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡದ ಅವರು, ನಾನು ಸಂಸದನಾಗಿರಲಿ, ಇಲ್ಲದಿರಲಿ ತಾಯಿ ಚಾಮುಂಡೇಶ್ವರಿಗೆ ಅವಮಾನ ಆಗುವುದಕ್ಕೆ ಬಿಡುವುದಿಲ್ಲ. ಯಾರ ನಿಲುವು ಏನೇ ಇರಲಿ. ನನ್ನ ನಿಲುವು ಮಾತ್ರ ಯಾವತ್ತಿಗೂ ಒಂದೇ ಎಂದರು.
ಮಹಿಷ ದಸರಾ ನಡೆಸುವವರು ಅವರ ಮನೆಗಳಲ್ಲಿ ಮಾಡಿಕೊಳ್ಳಲಿ. ನಮಗೆ ಮಹಿಷನಂತಹ ಮಕ್ಕಳೇ ಹುಟ್ಟಲಿ ಎಂದು ದಿನವೂ ಪೂಜಿಸಲಿ. ಅದಕ್ಕೆ ನಮ್ಮದೇನೂ ವಿರೋಧವಿಲ್ಲ ಎಂದು ಹೇಳಿದರು.