ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸ್ವಇಚ್ಛೆಯಿಂದ ತಮ್ಮ 14 ಬದಲಿ ನಿವೇಶನಗಳನ್ನು ವಶ ಪಡಿಸಿಕೊಳ್ಳುವಂತೆ ಪತ್ರ ಬರೆದು ಮುಡಾಕ್ಕೆ ವಾಪಸ್ ನೀಡಲು ಪಿಎಂಎಲ್‌ಎ ಕಾಯ್ದೆ 15 ಸೆಕ್ಷನ್ ಮಹತ್ವದ್ದಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ನನಗೆ ಯಾವುದೇ ಭಯವಿಲ್ಲ. ತಾನು ಹೋರಾಟಕ್ಕೆ ಸದಾ ಸಿದ್ದ ಅದನ್ನೇ ಮಾಡುತ್ತೇನೆ ಹೊರತು ರಾಜೀನಾಮೆ ಮಾತ್ರ ನೀಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಇದೀಗ ಸಿಎಂ ಅವರ ಪತ್ನಿ ನಿವೇಶನಗಳನ್ನು ವಾಪಸ್ ಮುಡಾಗೆ ಹಿಂತಿರುಗಿಸಿರುವುದು ಪ್ರಕರಣಕ್ಕೆ ದೊಡ್ಡ ತಿರುವನ್ನು ನೀಡಿದೆ. ಸಿಎಂ ಪತ್ನಿಯ ಈ ನಿರ್ಧಾರಕ್ಕೆ ವಿರೋಧ ಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ದ್ವೇಷ ರಾಜಕಾರಣದಿಂದ ಮಾತ್ರ ಸಾಧ್ಯ ಎಂದು ಕಾಂಗ್ರೆಸ್ ನಾಯಕ ಆರೋಪಿಸುತ್ತಿದ್ದಾರೆ.
ಮುಡಾ ಹಗರಣ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪತ್ನಿ ನಿವೇಶನಗಳನ್ನು ಹಿಂತಿರುಗಿಸಲು ಮುಖ್ಯವಾಗಿ ಮನಸ್ಸು ಮಾಡಲು ಜಾರಿ ನಿರ್ದೇಶಾಲಯದ 2003ರ ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 15ರ ಅಡಿಯಲ್ಲಿ ದಾಖಲಿಸಿರುವ ಪ್ರಕರಣವೇ ಕಾರಣ ಎನ್ನಲಾಗಿದೆ.
ಈ ಸೆಕ್ಷನ್ ಅಡಿಯಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದ್ದು, ಯಾವುದೇ ನ್ಯಾಯಾಲಯದ ಆದೇಶ ಪಡೆಯಬೇಕು ಎಂಬ ನಿಯಮವಿಲ್ಲ. ಜೊತೆಗೆ ಇದರಲ್ಲಿ ಸಂಬಂಧಪಟ್ಟ ಆಸ್ತಿಗಾಗಿ ಹಣಕಾಸು ಅಕ್ರಮ ವರ್ಗಾವಣೆ ನಡೆದಿದೆ ಎಂದು ತನಿಖಾಧಿಕಾರಿಗಳಿಗೆ ಅನಿಸಿದರೆ ಮಾತ್ರ ಆ ಅಧಿಕಾರಿಗಳು 180 ದಿನಗಳವರೆಗೂ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…