ಮೈಸೂರು ನಗರ

ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣ: ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದ ವಕೀಲ ಪಾಂಡು ಪೂಜಾರಿ

ಮೈಸೂರು: ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige murder case) ಸಂಬಂಧಿಸಿದಂತೆ ಇಂದು ಎಸ್ಪಿ ಅವರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ ಎಂದು ಆರೋಪಿ ಸುರೇಶ್ ಪರ ವಕೀಲ ಪಾಂಡು ಪೂಜಾರಿ (Pandu Pujari)  ಮಾಹಿತಿ ನೀಡಿದ್ದಾರೆ.

ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸುರೇಶ್ ಪರ ವಕೀಲ ಪಾಂಡು ಪೂಜಾರಿ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಪ್ಪುಗಳು ಸಾಕಷ್ಟು ಕಂಡು ಬಂದಿದೆ.

ಜಾರ್ಜ್‌ಶೀಟ್‌ನಲ್ಲಿ ಪೊಲೀಸರು ಸುಳ್ಳು ಕಥೆ ಕಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಪೊಲೀಸರಿಗೆ ಛೀಮಾರಿ ಹಾಕಿದೆ. ಅಲ್ಲದೆ ಇದೇ ತಿಂಗಳ 23ಕ್ಕೆ ತೀರ್ಪು ಕಾಯ್ದಿರಿಸಿದೆ. ಈ ಪ್ರಕರಣದಲ್ಲಿ ಮೂವರು ತನಿಖಾಧಿಕಾರಿಗಳು ಸೇರಿದಂತೆ 10 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕೋರ್ಟ್ ಕ್ರಮ ತೆಗೆದುಕೊಳ್ಳುವ ವಿಶ್ವಾಸವಿದೆ. ಐಪಿಸಿ ಸೆಕ್ಷನ್ 211 ಅಡಿಯಲ್ಲಿ ಪ್ರಕರಣ ದಾಖಲಿಸಿ ಎಂದು ಮನವಿ ಮಾಡಿದ್ದೇನೆ. ನ್ಯಾಯಾಂಗ ತನಿಖೆಗೂ ಕೂಡ ನಾನು ಮನವಿ ಮಾಡುತ್ತೇನೆ ಎಂದು ಪ್ರಕರಣ ಸಂಬಂಧ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

53 seconds ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

19 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

40 mins ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

1 hour ago

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

2 hours ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

2 hours ago