ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು.
ಮಂಡ್ಯ ಜಿಲ್ಲೆಯ ಎಸ್‌ಪಿ ಆಗಿದ್ದ ಬಾಲದಂಡಿ ಅವರನ್ನು ಮೈಸೂರು ಜಿಲ್ಲೆಗೆ ವರ್ಗಾಯಿಸಿ, ಈ ಸ್ಥಾನದಲ್ಲಿದ್ದ ಎನ್.ವಿಷ್ಣುವರ್ಧನ್ ಅವರಿಗೆ ಡಿಐಜಿಪಿ ಹುದ್ದೆಗೆ ಬಡ್ತಿ ನೀಡಿ ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ.
ಗುರುವಾರ ಸಂಜೆ ಕಚೇರಿಗೆ ಆಗಮಿಸಿದ ಮಲ್ಲಿಕಾರ್ಜುನ ಬಾಲದಂಡಿ ಅವರು ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ಅಧಿಕಾರಿಗಳು ಬರಮಾಡಿಕೊಂಡರು. ಇದಾದ ಬಳಿಕ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಮಲ್ಲಿಕ್ ಅವರು ಹೂಗುಚ್ಚ ನೀಡಿ ಅಧಿಕಾರ ಹಸ್ತಾಂತರಿಸಿದರು. ನಂತರ, ಕಡತಗಳಿಗೆ ಸಹಿ ಹಾಕುವ ಮೂಲಕ ಅಧಿಕಾರ ಪಡೆದರು. ಬಳಿಕ, ಮಾಧ್ಯಮದವರೊಂದಿಗೆ ಯಾವುದೇ ವಿಚಾರ ಮಾತನಾಡಲಿಲ್ಲ. ಈಗ ತಾನೇ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲೆಯ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.




