ಮೈಸೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ತೌಸೀಫ್ ಅಲಿಯಾಸ್ ದಾದು ಎಂಬಾತನೇ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆಸಾಮಿಯಾಗಿದ್ದಾನೆ. ಈ ಮಾರಕಾಸ್ತ್ರ ಹಿಡಿದು ಗುಂಪು ಸೇರಿಸಿ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿದ್ದನು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿತ್ತು.
ಇದನ್ನೂ ಓದಿ:- ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ವ್ಯಕ್ತಿ ಸಾವು
ಈ ಹಿನ್ನೆಲೆ ವೆಬ್ ಮಾನಿಟರ್ ವಿಭಾಗದಿಂದ ಪರಿಶೀಲಿಸಿ ಆತನನ್ನು ಬಂಧಿಸಲಾಗಿದೆ. ಯಾರು ಸಾರ್ವಜನಿಕವಾಗಿ ಈ ರೀತಿ ಮಾಡಬೇಡಿ. ಒಂದು ವೇಳೆ ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.





