ಮೈಸೂರು: ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಲಕ್ಷ್ಮೀಕಾಂತನಗರದಲ್ಲಿ ನಡೆದಿದೆ.
ನನ್ನ ಸಾವಿಗೆ ಕೆಳಗಡೆ ಮನೆಯಲ್ಲಿ ವಾಸಿಸುತ್ತಿರುವ ಇಬ್ಬರು ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಪ್ರಕರಣ ಸಂಬಂಧ ಮೃತರ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜು ಎಂಬುವವರೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ.
ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದರು. ಪತ್ನಿ ಜಯಪ್ರದ ಇನ್ಫೋಸಿಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು.
ಇದ್ದಕ್ಕಿದ್ದಂತೆ ರಾಜು ಸೆಲ್ಪೀ ವಿಡಿಯೋ ಮಾಡಿ ವಿಷ ಕುಡಿದು ನರಳಾಡುತ್ತಿದ್ದರು. ಈ ವೇಳೆ ರಾಜು ಅವರನ್ನು ಪರಿಚಯಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜು ಸಾವನ್ನಪ್ಪಿದ್ದಾರೆ.
ಸೆಲ್ಪೀ ವಿಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು. ನನ್ನ ಸಾವಿಗೆ ಅವರೇ ಕಾರಣ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಯಪ್ರದಾ ಅವರು, ಪತಿಯ ಸಾವಿನ ಬಗ್ಗೆ ಅನುಮಾನವಿದೆ. ಹಾಗಾಗಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…
ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್…
ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ…