ಮೈಸೂರು ನಗರ

ಮೈಸೂರು| ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಸಾವು

ಮೈಸೂರು: ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಲಕ್ಷ್ಮೀಕಾಂತನಗರದಲ್ಲಿ ನಡೆದಿದೆ.

ನನ್ನ ಸಾವಿಗೆ ಕೆಳಗಡೆ ಮನೆಯಲ್ಲಿ ವಾಸಿಸುತ್ತಿರುವ ಇಬ್ಬರು ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಪ್ರಕರಣ ಸಂಬಂಧ ಮೃತರ ಪತ್ನಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರಾಜು ಎಂಬುವವರೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್‌ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದರು. ಪತ್ನಿ ಜಯಪ್ರದ ಇನ್ಫೋಸಿಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು.

ಇದ್ದಕ್ಕಿದ್ದಂತೆ ರಾಜು ಸೆಲ್ಪೀ ವಿಡಿಯೋ ಮಾಡಿ ವಿಷ ಕುಡಿದು ನರಳಾಡುತ್ತಿದ್ದರು. ಈ ವೇಳೆ ರಾಜು ಅವರನ್ನು ಪರಿಚಯಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜು ಸಾವನ್ನಪ್ಪಿದ್ದಾರೆ.

ಸೆಲ್ಪೀ ವಿಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು. ನನ್ನ ಸಾವಿಗೆ ಅವರೇ ಕಾರಣ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಯಪ್ರದಾ ಅವರು, ಪತಿಯ ಸಾವಿನ ಬಗ್ಗೆ ಅನುಮಾನವಿದೆ. ಹಾಗಾಗಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹೆಬ್ಬಾಳು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

35 mins ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

38 mins ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

4 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

5 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

5 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

5 hours ago