ಮೈಸೂರು: ಭಾರತದಲ್ಲಿ 2ನೇ ಬಾರಿ ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದ ಸರಳ ಸಜ್ಜನಿಕೆ ವ್ಯಕ್ವಿತ್ವದ ಹಿರಿಯ ನಾಯಕ ಹಾಗೂ ಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್ ಅವರು ವಿಧಿವಶರಾಗಿರುವ ಸುದ್ದಿ ಆಘಾತ ತಂದಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಅತ್ಯಂತ ಗೌರವಾನ್ವಿತ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬ ಖ್ಯಾತ ರಾಜನೀತಿಜ್ಞ ಡಾ. ಮನಮೋಹನ ಸಿಂಗ್ ಅವರ ಸರಳತೆ, ಸಮಗ್ರತೆ ಮತ್ತು ದೂರದೃಷ್ಟಿಯ ನಾಯಕತ್ವಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಎರಡು ಬಾರಿ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಆರ್ಥಿಕ ಸುಧಾರಣೆಗಳು ಮತ್ತು ಅಭಿವೃದ್ಧಿಗೆ ಮಹತ್ವದ ಕೊಡುಗೆಗಳನ್ನು ನೀಡುವ ಮೂಲಕ ರಾಷ್ಟ್ರದ ಮೇಲೆ ಅಳಿಸಲಾಗದ ಅಭಿವೃದ್ಧಿಯನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಡಾ. ಸಿಂಗ್ ಅವರ ಬುದ್ಧಿವಂತಿಕೆ ಮತ್ತು ವಿನಯ ಎಲ್ಲರಿಗೂ ಮೆಚ್ಚಿಗೆ ಆಗುವಂತಹದ್ದು, ಆದರೆ ಅವರ ನಿಧನವೂ ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬಕ್ಕೆ, ಪ್ರೀತಿಪಾತ್ರರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ಭರಿಸಲಾಗದ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಡಾ. ಮನಮೋಹನ್ ಸಿಂಗ್ ಅವರ ಪರಂಪರೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.





