ಮೈಸೂರು ನಗರ

ಮನಮೋಹನ್‌ ಸಿಂಗ್‌ ನಿಧನ: ಸಂಸದ ಯದುವೀರ್‌ ಸಂತಾಪ

ಮೈಸೂರು: ಭಾರತದಲ್ಲಿ 2ನೇ ಬಾರಿ ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದ ಸರಳ ಸಜ್ಜನಿಕೆ ವ್ಯಕ್ವಿತ್ವದ ಹಿರಿಯ ನಾಯಕ ಹಾಗೂ ಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್‌ ಅವರು ವಿಧಿವಶರಾಗಿರುವ ಸುದ್ದಿ ಆಘಾತ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತದ ಅತ್ಯಂತ ಗೌರವಾನ್ವಿತ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬ ಖ್ಯಾತ ರಾಜನೀತಿಜ್ಞ ಡಾ. ಮನಮೋಹನ ಸಿಂಗ್‌ ಅವರ ಸರಳತೆ, ಸಮಗ್ರತೆ ಮತ್ತು ದೂರದೃಷ್ಟಿಯ ನಾಯಕತ್ವಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಎರಡು ಬಾರಿ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಆರ್ಥಿಕ ಸುಧಾರಣೆಗಳು ಮತ್ತು ಅಭಿವೃದ್ಧಿಗೆ ಮಹತ್ವದ ಕೊಡುಗೆಗಳನ್ನು ನೀಡುವ ಮೂಲಕ ರಾಷ್ಟ್ರದ ಮೇಲೆ ಅಳಿಸಲಾಗದ ಅಭಿವೃದ್ಧಿಯನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಡಾ. ಸಿಂಗ್ ಅವರ ಬುದ್ಧಿವಂತಿಕೆ ಮತ್ತು ವಿನಯ ಎಲ್ಲರಿಗೂ ಮೆಚ್ಚಿಗೆ ಆಗುವಂತಹದ್ದು, ಆದರೆ ಅವರ ನಿಧನವೂ ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬಕ್ಕೆ, ಪ್ರೀತಿಪಾತ್ರರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ಭರಿಸಲಾಗದ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಡಾ. ಮನಮೋಹನ್ ಸಿಂಗ್ ಅವರ ಪರಂಪರೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶೀಘ್ರದಲ್ಲಿಯೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಆರಂಭ

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…

1 min ago

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

34 mins ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

5 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

5 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

5 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

5 hours ago