ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ರಾಜಕೀಯ ನಾಯಕರು, ರೈತ ಪರ ಹೋರಾಟಗಾರರು ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮಾದರಿಗೆ ಸ್ಪಷ್ಟ ದೃಷ್ಠಿಕೋನ ಇಲ್ಲದ ಬಜೆಟ್:
ಕೃಷಿ ಮತ್ತು ಕೃಷಿ ಪೂರಕ ಕ್ಷೇತ್ರಕ್ಕೆ ಈ ಬಜೆಟ್‌ನಲ್ಲಿ ಕೇವಲ ಶೇ.೧೪ರಷ್ಟು ಭಾಗ ಮಾತ್ರ ಮೀಸಲಿಟ್ಟು ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವೇ ಇಲ್ಲ. ಕೇಂದ್ರ ಸರ್ಕಾರ ತರಲು ಹೊರಟಿರುವ ರೈತ ವಿರೋಧಿ, ಕೃಷಿ ವಿರೋಧಿ ನೀತಿಗಳನ್ನು ತಿರಸ್ಕರಿಸಿಲ್ಲ. ವಿದ್ಯುತ್ ಖಾಸಗೀಕರಣದ ವಿರುದ್ಧ ಚಕಾರ ಎತ್ತಿಲ್ಲ. ಹೀಗಾಗಿ ರೈತ ವಿರೋಧಿ ನೀತಿಗಳನ್ನು ರಾಜ್ಯ ಸರ್ಕಾರ ಮುಂದುವರಿಸಲು ಇಚ್ಚಿಸಿದಂತೆ ಕಾಣಲಿದೆ.
-ಬಡಗಲಪುರ ನಾಗೇಂದ್ರ, ಅಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ.
ಮೈಸೂರಿನ ಜನತೆಗೆ ಮಕ್ಮಲ್ ಟೋಫಿ:
ರಾಜ್ಯದ ಹಿತ ಕಾಯುವ ಬಜೆಟ್ ಅಲ್ಲ. ಒಂದು ಸಮುದಾಯ ಒಲೈಕೆಗಾಗಿ ಮಾಡಿರುವ ಬಜೆಟ್ ಇದಾಗಿದೆ. ಬೃಹತ್ ಮಹಾನಗರಪಾಲಿಕೆ ಹಣ ಬಜೆಟ್ ಇಲ್ಲ. ಪಾರಂಪರಿಕ ಕಟ್ಟಡ ನಿರ್ವಹಣೆಗೆ ಹಣ ಇಲ್ಲ. ಪ್ರವಾಸೋದ್ಯಮಕ್ಕೆ ಒತ್ತು ನೀಡಿಲ್ಲ. ತಮ್ಮ ಸ್ವ ಕ್ಷೇತ್ರಕ್ಕಾಗಿ ಫಿಲ್ಮ್ ಸಿಟಿ ನಿರ್ಮಿಸಲು ಹೊರಟ್ಟಿದ್ದಾರೆ. ಒಟ್ಟಾರೆ ಈ ಬಜೆಟ್ ಮೈಸೂರಿನ ಜನತೆಗೆ ಮಕ್ಮಲ್ ಟೋಫಿ ಹಾಕಿದ್ದಾರೆ.
– ಎಲ್.ನಾಗೇಂದ್ರ, ಮಾಜಿ ಶಾಸಕ.
ಈ ಬಾರಿಯ ಬಜೆಟ್ ಸಾಮಾನ್ಯ ಜನತೆಗೆ ಬರೆ ಎಳೆದು ಕೇವಲ ಒಂದು ವರ್ಗಕ್ಕೆ ಸೀಮಿತವಾದಂತಿದೆ. ಕರ್ನಾಟಕ ಬಜೆಟ್ ಅನ್ನು ಇಸ್ಲಾಮೀಕರಣಗೊಳಿಸಿದ್ದಾರೆ. ಎಸ್‌ಸಿ, ಎಸ್‌ಟಿ, ಓಬಿಸಿ ಸಮುದಾಯಗಳಿಗೆ ಚಿಪ್ಪು ಕೊಟ್ಟಿದ್ದಾರೆ. ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್‌ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ.
-ಎಲ್.ಆರ್.ಮಹದೇವಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…