ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರ ತಲೆದಂಡವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ತಿಂಗಳಿನಿಂದ ಮುಡಾ ಹಗರಣ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಇದರಿಂದ ತೀವ್ರ ಬೇಸರವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ ಮರಿಗೌಡರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿ, ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧಾರ ಮಾಡಿತ್ತು.
ಆದರೆ ಮರಿಗೌಡ ಅವರು, ಸಿಎಂ ಸಿದ್ದರಾಮಯ್ಯರ ಬಳಿ ದಸರಾ ಮಗಿಯುವವರೆಗೂ ನಾನು ರಾಜೀನಾಮೆ ನೀಡಲ್ಲ. ಆಡಳಿತಾಧಿಕಾರಿ ನಿರ್ಧಾರ ಬೇಡ ಎಂದು ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ದಸರಾ ಮುಗಿದು ಮೂರು ದಿನ ಕಳೆದಿದ್ದು, ಇಂದು ಅಥವಾ ನಾಳೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡುವ ಸಾಧ್ಯತೆಯಿದೆ.