ಮೈಸೂರು ನಗರ

ಮರೀಗೌಡ ತಲೆದಂಡ ಆಗಿರುವುದು ಸತ್ಯಕ್ಕೆ ಸಿಕ್ಕ ಜಯ: ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರ ತಲೆದಂಡವಾಗಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತರಾಗಿದ್ದ ನಟೇಶ್‌ ಹಾಗೂ ದಿನೇಶ್‌ ರಕ್ಷಣೆಯಾಗಿದೆ. ಈ ಕೂಡಲೇ ಅವರಿಬ್ಬರನ್ನು ಸರ್ಕಾರ ವಜಾ ಮಾಡಬೇಕು ಎಂದು ಅಗ್ರಹಿಸಿದರು.

ಇನ್ನು ಮುಡಾ ಅಧ್ಯಕ್ಷರಾಗಿದ್ದ ಮರೀಗೌಡ ತಲೆದಂಡ ಆಗಿರುವುದು ಸತ್ಯಕ್ಕೆ ಸಿಕ್ಕ ಜಯವಾಗಿದೆ. ಈ ಮೂಲಕ ನಮಗೆ ಮೊದಲ ಹಂತದಲ್ಲಿ ಗೆಲುವು ಸಿಕ್ಕಿದೆ. ಮುಡಾ ಹಗರಣ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಿಎಂಗೆ ಮನವಿ ಸಲ್ಲಿಸಿದ್ದೇವೆ. ಅವರಿಂದ ನ್ಯಾಯ ಸಿಗದಿದ್ದರೆ ನಾವೆಲ್ಲಾ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

10 mins ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

53 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

2 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

2 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

3 hours ago