ಮೈಸೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿರುವ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣದಲ್ಲಿ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ನಿನ್ನೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಮರೀಗೌಡ ಅವರಿಗೆ ರಾಜಕಾರಣಿಗಳ ಒತ್ತಡ ಇರಲಿಲ್ಲ. ಆದರೆ ರಕ್ತದ ಒತ್ತಡ ಹೆಚ್ಚಿದ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ಮರಿಗೌಡಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ರಾಜೀನಾಮೆ ಕೊಟ್ಟಿದ್ದಾರೆ. ಯಾವ ರಾಜಕಾರಣಿಗಳು ಕೂಡ ರಾಜೀನಾಮೆ ಕೊಡು ಎಂದು ಒತ್ತಡ ಹೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…