ಮೈಸೂರು ನಗರ

ಮೈಸೂರು ನಗರದಲ್ಲಿ ಏಕಾಏಕಿ ಹೊತ್ತಿ ಉರಿದ ಮಾರುತಿ ವ್ಯಾನ್

ಮೈಸೂರು: ನಗರದ ಮಧ್ಯಭಾಗದಲ್ಲಿರುವ ಸಯ್ಯಾಜಿರಾವ್ ರಸ್ತೆಯಲ್ಲಿ ಇಂದು ಮಾರುತಿ ವ್ಯಾನ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.

ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವ್ಯಾನ್‌ನಿಂದ ಅಚಾನಕ್ ಹೊಗೆ ಎದ್ದಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿತು. ಸದ್ಯ ಘಟನೆಯ ವೇಳೆ ವಾಹನದೊಳಗೆ ಯಾರೂ ಇರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನು ಓದಿ: ಮೈಸೂರು | ಕುಡಿಯಲು ಹಣ ನಿಡಲಿಲ್ಲವೆಂದು ಮನೆಗೆ ಬೆಂಕಿ ಹಚ್ಚಿದ ಭೂಪ

ಬೆಂಕಿ ಹೊತ್ತಿಕೊಂಡ ಕ್ಷಣದಲ್ಲೇ ಸ್ಥಳೀಯರು ತಕ್ಷಣ ತುರ್ತು ಪ್ರತಿಕ್ರಿಯೆ ನೀಡಿ ನೀರಿನಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಇನ್ನು ಸಯ್ಯಾಜಿರಾವ್ ರಸ್ತೆಯಲ್ಲಿ ಜನಸಂಚಾರ ಹೆಚ್ಚಿರುವ ಪರಿಣಾಮ ಈ ಘಟನೆ ಕೆಲಕಾಲ ಭೀತಿಯ ವಾತಾವರಣ ಸೃಷ್ಟಿಸಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

4 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

4 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

4 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

4 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

4 hours ago