ಮೈಸೂರು ನಗರ

ಎಂಸಿಡಿಸಿಸಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ: ಶಾಸಕ ಜಿ.ಡಿ.ಹರೀಶ್‌ ಗೌಡ

ಮೈಸೂರು: ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಕ್ರಮ ನಡೆದಿರುವುದನ್ನು ಸ್ವತಃ ಒಪ್ಪಿಕೊಂಡಿರುವ ಸಹಕಾರ ಸಚಿವ ರಾಜಣ್ಣಗೆ ಯಾವುದೇ ನೈತಿಕತೆ ಇಲ್ಲ ಎಂದು ಎಂಸಿಡಿಸಿಸಿ ಮಾಜಿ ಅಧ್ಯಕ್ಷ ಹಾಗು ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಎಂಸಿಡಿಸಿಸಿ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಅಕ್ರಮ ನಡೆದಿದೆ. ಇದನ್ನ ಸ್ವತಃ ಸಚಿವ ರಾಜಣ್ಣ ಒಪ್ಪಿಕೊಂಡಿದ್ದಾರೆ. ಎಲ್ಲೆಲ್ಲಿ ಮತ ಸೇರಿಸಿದ್ದಾರೆ ಆ ಕ್ಷೇತ್ರಗಳಿಗೆ ಮರು ಚುನಾವಣೆ ಮಾಡಿ ಎಂದು ನ್ಯಾಯಾಲಯದಲ್ಲಿ ಕೇಳುತ್ತೇವೆ. ಸಹಕಾರ ಸಚಿವ ರಾಜಣ್ಣಗೆ ಯಾವ ನೈತಿಕತೆಯೂ ಉಳಿದಿಲ್ಲ. ನಾನು ಅವರ ರಾಜೀನಾಮೆ ಕೇಳುವುದಿಲ್ಲ, ಅದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ. ರಾಜಣ್ಣ ಹೇಳಿಕೆಯನ್ನು ಕೋರ್ಟ್‌ಗೆ ಸಲ್ಲಿಸುತ್ತೇವೆ. ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟವಾಗಿ ಅಕ್ರಮ ನಡೆಸಿದೆ. ಸಹಕಾರ ಕ್ಷೇತ್ರವನ್ನೇ ಹಾಳು ಮಾಡಲು ರಾಜಣ್ಣ ಹೆಜ್ಜೆ ಇಟ್ಟಿದ್ದಾರೆ‌. ಚುನಾವಣಾ ಅಕ್ರಮವನ್ನು ಹೇಗೆ ಮಾಡಬಹುದು ಎಂಬುದನ್ನು ರಾಜಣ್ಣ ಹೇಳಿ ಕೊಟ್ಟಿದ್ದಾರೆ. ಈ ಬಗ್ಗೆ ನಾನು ಸದನದಲ್ಲೂ ಚರ್ಚೆ ಮಾಡುತ್ತೇನೆ. ಮತಗಳನ್ನು ಸರ್ಕಾರ ಸೇರಿಸದಿದ್ದರೆ ಇಬ್ಬರು ಶಾಸಕರು ಹಾಗೂ ಮಾಜಿ ಶಾಸಕ ಸೋತು ಹೋಗುತ್ತಿದ್ದರು‌. ಅವರೆಲ್ಲಾ ಗೆದ್ದಿರುವುದು ಒಂದೊಂದು ಮತಗಳಿಂದ. ಇದು ಅಕ್ರಮವಾಗಿ ಬಂದಿರುವ ಮತಗಳು ಎಂದು ಆರೋಪಿಸಿದರು.

ಇನ್ನು ಎಂಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಪ್ರಭಾವ ಬೀರಿರುವುದು ಸಚಿವ ರಾಜಣ್ಣ ಹೇಳಿಕೆಯಿಂದ ಸಾಬೀತಾಗಿದೆ. ಎಂಸಿಡಿಸಿಸಿ‌ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಭಾವ ಬೀರುವ ಬಗ್ಗೆ ನಾವ್ಯಾರು ಇದುವರೆಗೂ ಹೇಳಿರಲಿಲ್ಲ. ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ದರಾಮಯ್ಯ ರಣತಂತ್ರ ರೂಪಿಸಿರುವುದನ್ನು ಸಚಿವ ರಾಜಣ್ಣ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಯಾವ ಉದ್ದೇಶದಿಂದ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಸಹಕಾರ ಕ್ಷೇತ್ರಕ್ಕೆ ಅನಗತ್ಯವಾಗಿ ರಾಜಕೀಯ ಹಸ್ತಕ್ಷೇಪ ಮಾಡುವುದು ಅಪಾಯಕಾರಿ ಬೆಳವಣಿಗೆ. ಸಿಎಂ ಸಿದ್ದರಾಮಯ್ಯ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ. ಟಿ ನರಸೀಪುರ ಹಾಗು ನಂಜನಗೂಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೀನಾಯವಾಗಿ ಸೋಲು ಕಂಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಗಿರುವ ಬಹುದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಇನ್ನು ಮುಂದಾದರೂ ಸಹಕಾರಿ ಕ್ಷೇತ್ರದಲ್ಲಿ ಪಾರದರ್ಶಕ ಆಡಳಿತ ನಡೆಸಲು ಸರ್ಕಾರ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

22 mins ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

25 mins ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

28 mins ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

33 mins ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

2 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

2 hours ago