ಮೈಸೂರು ನಗರ

ಎಲ್ಲರ ಮೇಲೂ ಚಾಮುಂಡೇಶ್ವರಿ ಕೃಪೆ ಇರಲಿ: ಪ್ರಮೋದಾದೇವಿ ಒಡೆಯರ್‌

ಮೈಸೂರು: ನಾಡದೇವತೆ ಚಾಮುಂಡೇಶ್ವರಿ ರಥೋತ್ಸವವು ದಸರಾದ ಒಂದು ಭಾಗವೇ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ರಥೋತ್ಸವದ ಸಂಭ್ರಮ ಮನೆಮಾಡಿದೆ.

ಇದನ್ನು ಓದಿ : ಚಾಮುಂಡಿಬೆಟ್ಟದಲ್ಲಿ ಅದ್ಧೂರಿ ರಥೋತ್ಸವ: ಮೂಲವಿಗ್ರಹಕ್ಕೆ ಸಿಂಹವಾಹಿನಿ ಅಲಂಕಾರ

ರಥೋತ್ಸವ ಮುಗಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ದಸರಾ ಹಾಗೂ ಚಾಮುಂಡೇಶ್ವರಿ ರಥೋತ್ಸವ ಸುಸೂತ್ರವಾಗಿ ನಡೆದಿದೆ. ತಾಯಿ ಚಾಮುಂಡೇಶ್ವರಿ ದೇಶದ ಜನತೆಗೆ ಒಳಿತು ಮಾಡಲಿ. ರಥೋತ್ಸವವೂ ದಸರಾದ ಒಂದು ಭಾಗವೇ. ಇದು ಕೂಡ ಅತ್ಯಂತ ಸಡಗರದಿಂದ ಜರುಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಇದೇ ವೇಳೆ ಮಾತನಾಡಿದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಪದ್ದತಿಯಂತೆ ಇಂದು ಅಮ್ಮನವರ ರಥೋತ್ಸವ ಜರುಗಿದೆ. ಸರಿಯಾದ ರೀತಿಯಲ್ಲಿ ಸಮಯಕ್ಕೆ ತಕ್ಕಂತೆ ಎಲ್ಲಾ ವಿಧಿ ವಿಧಾನಗಳು ಜರುಗಿವೆ. ನಾಡಿನ ಸಮಸ್ತ ಜನತೆ ಆರೋಗ್ಯ, ಸಮೃದ್ಧಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

7 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago