ಮೈಸೂರು ನಗರ

ಜಾತಿಗಣತಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ : ಸಚಿವ ಎಂಬಿ ಪಾಟೀಲ್‌

ಮೈಸೂರು: ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಜಾತಿ ಗಣತಿ ವರದಿಯಿಂದ ಯಾವುದೇ ಜಾತಿ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು(ಜನವರಿ.17) ಅಂತರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ವತಿಯಿಂದ ಆಯೋಜಿಸಿರುವ ಮೂರು ದಿನಗಳ ವೀರಶೈವ ಲಿಂಗಾಯತ ಬಿಸಿನೆಸ್‌ ಕಾಂಕ್ಲೇವ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿಗಣತಿಯಲ್ಲಿ ಲಿಂಗಾಯತ, ಒಕ್ಕಲಿಗ ಉಪ ಪಂಗಡಗಳನ್ನು ಅದೇ ಜಾತಿಯ ಅಡಿಯಲ್ಲಿ ಪರಿಗಣಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಅದಕ್ಕೆ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅದನ್ನು ತೆರೆದ ನಂತರವೇ ಅದರ ಸಾಧಕ-ಬಾಧಕಗಳು ತಿಳಿಯುವುದು. ಅದಕ್ಕೂ ಮುನ್ನ ಜಾತಿಗಣತಿ ವರದಿ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಲಿಂಗಾಯ ಉಪ್ಪಾರ, ಕುರುಬ, ಕುಂಬಾರ, ಹಡಪದ, ಗಾಣಿಗ ಸೇರಿದಂತೆ ಮುಂತಾದ ಉಪ ಪಂಗಡಗಳು ಲಿಂಗಾಯತ ಬದಲು ಹಿಂದೂ ಎಂದೇ ಬರೆಸಿವೆ. ಅಲ್ಲದೇ 2ಎ ಮೀಸಲಾತಿಗಾಗಿ ಗಾಣಿಗ ಲಿಂಗಾಯತರೂ ಹಿಂದೂ ಗಾಣಿಗ ಎಂದೂ 3ಎ ಮೀಸಲಾತಿಗೆ ರೆಡ್ಡಿ ಲಿಂಗಾಯತರು ಹಿಂದೂ ರೆಡ್ಡಿ ಎಂದೇ ದಾಖಲಿಸಿಕೊಂಡಿದ್ದಾರೆ. ಆದರೆ ಅದನ್ನು ನಾನು ತಪ್ಪು ಎಂದೂ ಹೇಳಲಾರೆ. ಏಕೆಂದರೆ ಅವರಿಗೆ ಬೇಕಿರುವುದು ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ಅಷ್ಟೇ ಎಂದು ಹೇಳಿದರು.

ಲಿಂಗಾಯತ ಸಮುದಾಯ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಿದ್ದರೆ ಈ ಎಲ್ಲ ಉಪ ಪಂಗಡಗಳಿಗೂ ನ್ಯಾಯ ದೊರೆಯುತ್ತಿತ್ತು. ಆದರೆ ಸ್ವತಂತ್ರ ಧರ್ಮ ಹೋರಾಟವನ್ನು ವಿರೋಧಿಸಿದವರಿಗೆ ಇಂದು ಅದೆಲ್ಲಾ ಅರ್ಥವಾಗುತ್ತದೆ. ಇದನ್ನೇ ನಾನು ವೀರಶೈವ ಮಹಾ ಅಧೀವೇಶನದಲ್ಲಿ ಕಾಶಿ ಸ್ವಾಮೀಜಿ ಅವರಿಗೂ ಹೇಳಿದ್ದೇನೆ. ಸಮಾಜದಲ್ಲಿ ಎಲ್ಲಾ ಸಮುದಾಯದವರು ಒಗ್ಗಟ್ಟಾಗಿದ್ದರೆ ಮಾತ್ರ ರಾಜಕೀಯ ಶಕ್ತಿಯಾಗಿ ಉಳಿಯುತ್ತದೆ. ಇಲ್ಲವಾದರೆ ನಿರಾಶರಾಗಿ ಹೋಗುತ್ತವೆ ಎಂದು ತಿಳಿಸಿದರು.

ನಾನು ಸಿಎಂ ಕುರ್ಚಿಗೆ ಟಿಕೆಟ್‌ ಆಕಾಂಕ್ಷಿಯಲ್ಲ

ನಗರದಲ್ಲಿ ಇಂದು ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಅಲ್ಲದೇ ನಾನು ಆ ಸ್ಥಾನಕ್ಕೆ ಆಕಾಂಕ್ಷಿಯೂ ಅಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

8 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

8 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

11 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

12 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

13 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

13 hours ago