ಮೈಸೂರು: ಎಂಸಿಡಿಸಿಸಿ ಆಡಳಿತ ಮಂಡಳಿ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಿದೆ ಎಂದು ಶಾಸಕ ಜಿ ಡಿ ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಗೆ ಎರಡು ದಿನಗಳಿರುವಾಗ ಮತದಾರರು ಮತದಾನ ಮಾಡುವ ಹಕ್ಕನ್ನು ಕಸಿಯುವ ಯತ್ನ ನಡೆದಿದೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಸರ್ಕಾರ ಅಧಿಕಾರ ಬಳಸಿಕೊಂಡು ಒತ್ತಡ ಹೇರುವುದು ಸರಿಯಲ್ಲ. ಚುನಾವಣೆ ತಡೆಯುವ ವ್ಯವಸ್ಥಿತ ಹುನ್ನಾರ ನಡೆದಿದೆ. ಮತದಾರರ ಹಕ್ಕು ಕಸಿಯುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.
ಇನ್ನು ಸಹಕಾರಿ ಕ್ಷೇತ್ರವನ್ನು ಉಳಿಸುವ ಸಲುವಾಗಿ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ರಾಜಕೀಯ ಕಾರಣಗಳಿಗೋಸ್ಕರ ಸಹಕಾರಿ ಕ್ಷೇತ್ರ ಹಾಳಾಗಬಾರದು. ನಾನು ಎಂಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಎರಡೂ ಜಿಲ್ಲೆಗಳ ರೈತರನ್ನು ಸಮಾನವಾಗಿ ಕಂಡಿದ್ದೇನೆ. ಎರಡೂ ಜಿಲ್ಲೆಗಳ ರೈತರಿಗೆ ಸಾಲ ನೀಡಿದ್ದೇನೆ.
ಆದರೆ ಕಳೆದ ಒಂದೂವರೆ ವರ್ಷದಿಂದ ರೈತರಿಗೆ ಸಮರ್ಪಕವಾಗಿ ಸಾಲ ನೀಡಿಲ್ಲ. ಇದನ್ನು ಸಹಕಾರಿ ಕ್ಷೇತ್ರದ ಮತದಾರರು ಗಮನಿಸುತ್ತಾರೆ.ಯಾವುದೇ ಆಸೆ ಆಮಿಷಗಳಿಗೆ ಮತದಾರರು ಮಣಿಯುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…