ಮೈಸೂರು: ಎಂಡಿಸಿಸಿ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಯ್ದಿರಿಸಿದ್ದ ಮತ ಎಣಿಕೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಜಯಗಳಿಸಿದ್ದಾರೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದು ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, ಎಚ್.ಡಿ.ಕೋಟೆ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಜಯಗಳಿಸಿದ್ದಾರೆ.
ಕಳೆದ ಜೂನ್.27ರಂದು ಚುನಾವಣೆ ನಡೆದಿತ್ತು. ಪ್ರತಿ ಸ್ಪರ್ಧಿ ಹಾಗೂ ಶಾಸಕ ಅನಿಲ್ ಚಿಕ್ಕಮಾದುಗೆ ತಲಾ 8 ಮತಗಳು ಬಂದಿದ್ದವು. ನ್ಯಾಯಾಲಯದಲ್ಲಿ ಮತದಾನದ ಹಕ್ಕು ಪಡೆದಿದ್ದ ಮತದಾರರೊಬ್ಬರ ಮತ ಎಣಿಕೆಯನ್ನು ಕಾಯ್ದಿರಿಸಲಾಗಿತ್ತು. ನಂತರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಮತ ಎಣಿಕೆಗೆ ಅನುಮತಿ ನೀಡಿತ್ತು.
ಅದರಂತೆ ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಹಾಗೂ ಎಸಿ ಆಶಪ್ಪ ನೇತೃತ್ವದಲ್ಲಿ ಮತ ಎಣಿಕೆ ನಡೆದಿದ್ದು, ಶಾಸಕ ಅನಿಲ್ ಚಿಕ್ಕಮಾದುಗೆ ಜಯ ಒಲಿದಿದೆ.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…