Mysore
14
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲುವ ಉದ್ದೇಶದಿಂದ, ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಮಾವೇಶ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ವತಿಯಿಂದ, ನಾಳೆ (24/12/2025) ಬೆಳಿಗ್ಗೆ 11.30ಕ್ಕೆ ಪೂರ್ವಭಾವಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಸಭೆಯಲ್ಲಿ ಅಹಿಂದ ಸಮಾವೇಶದ ರೂಪುರೇಷೆಗಳು, ದಿನಾಂಕ ಹಾಗೂ ಸ್ಥಳದ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನು ಓದಿ: ಮೇಟಿ ಅವರು ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಸಿ.ಎಂ ಸಿದ್ದರಾಮಯ್ಯ

‘ಸಿದ್ದರಾಮಯ್ಯ ಇವತ್ತಿನ ಅನಿವಾರ್ಯತೆ’ ಎಂಬ ಘೋಷಣೆಯೊಂದಿಗೆ ಸಮಾವೇಶ ಆಯೋಜನೆಗೆ ತಯಾರಿ ನಡೆಸಲಾಗಿದ್ದು, ಅಹಿಂದ ವರ್ಗಗಳ ಏಕತೆಯನ್ನು ಪ್ರದರ್ಶಿಸುವುದು ಹಾಗೂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸುವುದೇ ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ.

ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ನಡೆಯಲಿರುವ ಈ ಸಭೆಗೆ ರಾಜಕೀಯ ಮಹತ್ವ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಇದರ ಪರಿಣಾಮ ಸ್ಪಷ್ಟವಾಗಿ ಕಾಣಿಸಿಕೊಳ್ಳಲಿದೆ ಎನ್ನಲಾಗುತ್ತಿದೆ.

Tags:
error: Content is protected !!