ಮೈಸೂರು ನಗರ

ಗಾಂಜಾ ವಿರುದ್ಧ ಮೈಸೂರಿನಲ್ಲಿ ಮಿಡ್‌ನೈಟ್‌ ಕಾರ್ಯಾಚರಣೆ: ಖುದ್ದು ಫೀಲ್ಡಿಗಿಳಿದ ಪೊಲೀಸ್‌ ಕಮೀಷನರ್‌

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ನಿನ್ನೆ ಮೈಸೂರು ನಗರದಾದ್ಯಂತ ದಿಢೀರ್‌ ಕಾರ್ಯಾಚರಣೆ ನಡೆದಿದ್ದು, ಪೊಲೀಸ್‌ ಕಮೀಷನರ್‌ ಸೀಮಾ ಲಾಟ್ಕರ್‌ ಅವರೇ ಖುದ್ದು ಫೀಲ್ಡ್‌ಗೆ ಇಳಿದಿದ್ದಾರೆ.

ತಡರಾತ್ರಿ ಮಂಡಿ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಮಿಡ್‌ನೈಟ್‌ ಕಾರ್ಯಾಚರಣೆ ನಡೆದಿದ್ದು, 26 ಮಂದಿ ಗಾಂಜಾ ಸೇವಿಸಿದವರು ಪತ್ತೆಯಾಗಿದ್ದಾರೆ. ಒಬ್ಬ ಮಾರಾಟಗಾರನನ್ನು ವಶಕ್ಕೆ ಪಡೆಯಲಾಗಿದ್ದು, ಮಂಡಿ, ಮೊಹಲ್ಲಾ, ಉದಯಗಿರಿ, ಎನ್.ಆರ್.‌ಮೊಹಲ್ಲಾ, ನಜರ್‌ಬಾದ್‌, ಕೆ.ಆರ್.ಮೊಹಲ್ಲಾ ಸೇರಿದಂತೆ ಹಲವು ಪಡೆ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಲಾಗಿದೆ.

ಡಿಸಿಪಿಗಳು, ಎಸಿಪಿಗಳು ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, 59 ಗೋದಾಮುಗಳನ್ನು ಪರಿಶೀಲನೆ ಮಾಡಲಾಗಿದೆ. ಹಾಸ್ಟೆಲ್‌ಗಳು ಸೇರಿದಂತೆ ಹಲವು ಕಡೆ ತಪಾಸಣೆ ನಡೆಸಲಾಗಿದ್ದು, ಈ ಹಿಂದೆ ಗಾಂಜಾ ಮಾರಾಟ‌ ಮಾಡುತ್ತಿದ್ದ 35 ಜನರನ್ನು ವಿಚಾರಣೆ ನಡೆಸಿದ್ದಾರೆ. ಇಂದು ಸಹಾ ಕಾರ್ಯಾಚರಣೆ ಮುಂದುವರಿಯಲಿರುವ ಸಾಧ್ಯತೆಯಿದ್ದು, ಗಾಂಜಾ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

26 mins ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

41 mins ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

1 hour ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago