ಮೈಸೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಟೀಕೆ ಮಾಡುವ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತಪ್ಪು ಮಾಡಿದ್ರೆ ಚಾಮುಂಡೇಶ್ವರಿ ಬಳಿ ಆಣೆ ಮಾಡುತ್ತೇನೆ ಬನ್ನಿ ಎಂದಿದ್ದೆ. ಆಣೆ ಪ್ರಮಾಣಕ್ಕೆ ಅವರು ಬರಲಿಲ್ಲ. ಲೋಕಾಯುಕ್ತ ಕೊಟ್ಟಿರುವ ರಿಪೋರ್ಟ್‌ಗೂ ನಮಗೂ ಸಂಬಂಧವಿಲ್ಲ. ಪ್ರಕರಣದಲ್ಲಿ ಯಾವುದೇ ತಪ್ಪು ಕಾಣಿಸಿಲ್ಲ, ಅದನ್ನೇ ಬಿ ರಿಪೋರ್ಟ್ ಮಾಡಿದ್ದಾರೆ. ಲೋಕಾಯುಕ್ತ ವರದಿಯನ್ನು ನಾನು ಸ್ವಾಗತಿಸುತ್ತೇನೆ. ಮುಡಾ ಹಗರಣದಲ್ಲಿ ನಾನಾಗಲಿ, ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತರು ಸತ್ಯ ಸತ್ಯತೆ ಕಂಡು ಹಿಡಿದಿದ್ದಾರೆ. ಅವರಂತೆ ಇಡಿ ಅಧಿಕಾರಿಗಳು ಸಹ ತನಿಖೆ ಮಾಡಲಿ ಎಂದು ಆಗ್ರಹಿಸಿದರು.
ಇನ್ನು 50:50 ಸೈಟ್ ತಗೊಂಡಿರೋದು ಸರಿ ತಪ್ಪು ಎಂದು ಹೇಳೋದಿಲ್ಲ. ಜಾಗ ಕಳೆದುಕೊಂಡಿರುವವರಿಗೆ ಅನ್ಯಾಯ ಆಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…