ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ, ಡಿಸಿಎಂ ಎಲ್ಲರೂ ಸಹ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಪುನರುಚ್ಚರಿಸಿದರು.
ಇದೇ ವೇಳೆ ರಾಜ್ಯದಲ್ಲಿ ಪ್ರತಿಪಕ್ಷವಾದ ಬಿಜೆಪಿ ಸಂಪೂರ್ಣ ನಿಷ್ಕ್ರಿಯವಾಗಿದೆ. ಬಿಜೆಪಿ ನಾಯಕರು ಬರೀ ಭಾಷಣ ಬಿಗಿಯುವುದರಲ್ಲೇ ಬ್ಯುಸಿ ಇದ್ದಾರೆ. ಕೇಂದ್ರದಲ್ಲಿ ಸಂಸದರು ಧ್ವನಿ ಎತ್ತುತ್ತಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.




