ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಂದು ಇತ್ತೀಚಿಗಷ್ಟೇ ನಿಧನರಾದ “ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು” ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿ ಅವರ ನಿವಾಸಕ್ಕೆ ಭೇಟಿ ನೀಡಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಸಂತಾಪ ಸೂಚಿಸಿದರು.
ಈ ವೇಳೆ ಕೆ.ಬಿ.ಜಿ ಅವರ ಸಮಾಜಮುಖಿ ಪತ್ರಿಕೋದ್ಯಮ ಕುರಿತಂತೆ ಅವರ ಕುಟುಂಬದವರೊಡನೆ ಸ್ಮರಿಸಿದರು. ಈ ವೇಳೆ ಹಿರಿಯ ಪತ್ರಕರ್ತ ಕೆ.ಶಿವಕುಮಾರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೆಪಿಸಿಸಿ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಕೆ.ಎನ್.ಸುಂದರ್ ರಾಜು ಸೇರಿದಂತೆ ಮತ್ತಿತರರು ಇದ್ದರು.





