ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತಾಯಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಚಾಮುಂಡಿ ಬೆಟ್ಟದಲ್ಲಿ ಬಸ್ ಸ್ಟ್ಯಾಂಡ್, ವಾಹನಗಳ ಪಾರ್ಕಿಂಗ್, ದೇವರ ದರ್ಶನ ವ್ಯವಸ್ಥೆ ಪರಿಶೀಲನೆ ಮಾಡಿದರು. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪ ಸೇರಿದಂತೆ ಹಲವರು ಭಾಗಿಯಾಗಿದ್ದರು.





