ಮೈಸೂರು: ಮೈಸೂರಿನ ನಾಡನಹಳ್ಳಿ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಚಿವ ಮಹದೇವಪ್ಪ ಅವರು, ಅಂಬೇಡ್ಕರ್ ಅವರ ಗೌರವದ ಸಂಕೇತವಾಗಿ ಪ್ರತಿಮೆಗಳನ್ನು ನಿರ್ಮಿಸುತ್ತಿದ್ದೇವೆ. ನಮ್ಮ ಜನರು ಬಾಬಾ ಸಾಹೇಬರ ಮಾತನ್ನು ಅರ್ಥಮಾಡಿಕೊಂಡು ಶಿಕ್ಷಣ ಪಡೆದು, ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಈ ಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟು ಮೇಲ್ದರ್ಜೆಗೇರಿದೆ. ಆದರೂ ಇಲ್ಲಿ ಗ್ರಾಮಸ್ಥರಿಗೆ ಕೆಲವು ತೊಂದರೆ ಉಂಟಾಗುತ್ತಿದೆ. ಈ ಗ್ರಾಮದ ನಿರಾಶ್ರಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ವಿತರಿಸಲು ಸಚಿವರೊಂದಿಗೆ ಮಾತನಾಡಿ ಕ್ರಮವಹಿಸಲಾಗುವುದು ಎಂದು ಹೇಳಿದರು.
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…