ಮೈಸೂರು ನಗರ

ಸಚಿವ ರಾಜಣ್ಣ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಎಂಎಲ್‌ಸಿ ರಾಜೇಂದ್ರ

ಮೈಸೂರು: ಹನಿಟ್ರ್ಯಾಪ್‌ ಹಾಗೂ ಕೊಲೆ ಸುಪಾರಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಸಚಿವ ರಾಜಣ್ಣ ಅವರ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಹಾಗೂ ಕೊಲೆ ಸಂಚು ಸಂಬಂಧಪಟ್ಟಂತೆ ನಾವು ಈಗಾಗಲೆ ದೂರು ನೀಡಿದ್ದೇವೆ. ಯಾರು ನಮ್ಮನ್ನು ಟಾರ್ಗೆಟ್‌ ಮಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆರಂಭದಲ್ಲಿ ಇದು ತಮಾಷೆ ಅನ್ನಿಸಿತ್ತು. ಆದರೆ ಹನಿಟ್ರ್ಯಾಪ್‌ ನಂತರ ಈ ವಿಚಾರವನ್ನು ಸೀರಿಯಸ್‌ ಆಗಿ ತೆಗೆದುಕೊಂಡು ದೂರು ನೀಡಿದ್ದೇವೆ. ಆಡಿಯೋ ಅನುಸರಿಸಿ ಕೆಲವರನ್ನು ಬಂಧಿಸಲಾಗಿದೆ. ಸಿಐಡಿ ತನಿಖೆಯ ನಂತರ ಎಲ್ಲ ಹೊರಬರಲಿದೆ ಎಂದು ಹೇಳಿದರು.

ಈ ಪ್ರಕರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ ಎನ್ನುವುದು ಗೊತ್ತಿಲ್ಲ. ಮೀಡಿಯಾದವರೇ ಮಹಾನಾಯಕ ಅಂತ ಹೆಸರು ಕೊಟ್ಟಿರೋದು. ನೀವೆ ಯಾರು ಅಂತ ಹೇಳಿ. ಈ ಪಿತೂರಿಯಿಂದ ಯಾರೇ ಇದ್ದರೂ ಒಳ್ಳೆಯದಾಗಲ್ಲ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

6 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

6 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

6 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago