satish jarakihole
ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್ ಹಿಂದಿರುಗಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇದೆ.
ಈ ಹಿನ್ನೆಲೆಯಲ್ಲಿ ತಾವು ಪ್ರೀತಿ ಪೂರ್ವಕವಾಗಿ ತಮ್ಮ ವಿಶ್ವವಿದ್ಯಾನಿಲಯದ ವತಿಯಿಂದ ನನಗೆ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ಮುಂದುವರೆದಂತೆ, ನನ್ನ ಈ ನಿರ್ಧಾರವನ್ನು ಅನ್ಯಥಾ ಭಾವಿಸಬೇಡಿ. ಇದು ನಾನು ಮನಸೋಯಿಚ್ಛೆ ಕೈಗೊಂಡಿರುವ ನಿರ್ಧಾರವಾಗಿದ್ದು, ತಾವು ಈ ನಿರ್ಧಾರವನ್ನು ಸ್ವಾಗತಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಕಳೆದ ಮಾರ್ಚ್.27ರಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…