Mysore
22
haze

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ: ಪ್ರತಿಭಟನೆ

ಮೈಸೂರು: ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಎಸ್.ಸಿ, ಎಸ್.ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ಒಕ್ಕೂಟ ಶುಕ್ರವಾರ(ಜು.12) ಪ್ರತಿಭಟನೆ ನಡೆಸಿದರು.

ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ದಲಿತರಿಗೆ ಮೀಸಲ್ಲಿಟ್ಟಿರುವ SCP-TSP ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಚಿನ್, ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಲ್ಲದೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶೇಕಡ 60 ಕ್ಕಿಂತ ಹೆಚ್ಚಿನ ಅಂಕ ಪಡೆದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಪ್ರಸಕ್ತ ಸಾಲಿನಿಂದ ಶೇಕಡ 75 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುವಂತೆ ಆದೇಶ ಹೊರಡಿಸಿದ್ದು ಇಂದರಿಂದಾಗಿ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಕಾಲೇಜುಗಳ ಪ್ರವೇಶಾತಿ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಮುಂಗಡ ಶುಲ್ಕ ಕಟ್ಟದೆಯೇ ಪ್ರವೇಶ ಪಡೆಯಬಹುದು ಎಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಎಷ್ಟು ಕಾಲೇಜುಗಳಲ್ಲಿ ಜಾರಿ ಮಾಡಲಾಗಿದೆ? ಎಂದು ಪ್ರಶ್ನಿಸಿದ ಅವರು, ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ದಲಿತ ವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ನವೀನ್ ಕೋಳೂರು, ಗಿರೀಶ್ ಬೆಂಡರವಾಡಿ, ಮುತ್ತುರಾಜ್, ರೋಹಿತ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:
error: Content is protected !!