ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್ ಹಾಸನ್ ಹೇಳಿಕೆಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಆ ರೀತಿ ಹೇಳಿರುವುದು ಖಂಡನೀಯ. ನಮ್ಮ ಕನ್ನಡ ಭಾಷೆಗೆ ಅದರದೇ ಆದ ಸಾವಿರಾರು ವರ್ಷಗಳ ಇತಿಹಾಸ ಇದೆ. ತಮಿಳಿನಿಂದ ಕನ್ನಡ ಹುಟ್ಟಿದೆ ಎಂದಿರುವುದು ಸರಿಯಲ್ಲ. ಕನ್ನಡ ಸಾಹಿತ್ಯ ಲೋಕ ತಮಿಳು ಸಾಹಿತ್ಯಕ್ಕಿಂತ ಮಿಗಿಲಾಗಿದೆ. ಕನ್ನಡದಿಂದಲೇ ತಮಿಳು ಬಂದಿದೆ ಎನ್ನಬಹದು. ಕನ್ನಡದ ಆಡು ಭಾಷೆಯ ಎಷ್ಟೋ ಅಂಶಗಳನ್ನು ತಮಿಳಿನವರು ಕಾಪಿ ಹೊಡೆದಿದ್ದಾರೆ. ಆದ್ದರಿಂದ ಈ ಕೂಡಲೇ ಕಮಲ್ ಹಾಸನ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.



