ಮೈಸೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಸಭೆ ಮಾಡುತ್ತಿದ್ದು, ಕೇಂದ್ರದ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಸಂಬಂಧ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ಉಗ್ರರ ದಾಳಿಯನ್ನು ಭಾರತೀಯರಾದ ಎಲ್ಲರೂ ಖಂಡಿಸಲೇಬೇಕು. ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಪಾಕಿಸ್ತಾನದ ಮೇಲೆ ಯುದ್ಧ ಘೋಷಣೆ ಮಾಡಬೇಕಾ ಬೇಡವಾ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸರ್ಕಾರ ಮಹತ್ವದ ಸಂಪುಟ ಸಭೆ ಕರೆದಿದೆ.
ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಭಾರತೀಯತೆ ವಿಚಾರ ಬಂದಾಗ ನಾವೆಲ್ಲಾ ಒಂದಾಗಿ ಒಗ್ಗಟ್ಟು ಪ್ರದರ್ಶನ ಮಾಡಲೇಬೇಕು. ಉಗ್ರರ ಅಟ್ಟಹಾಸವನ್ನು ಮಟ್ಟ ಹಾಕಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ರಾಜ್ಯ ಸರ್ಕಾರಗಳ ಬೆಂಬಲ ಇದ್ದೇ ಇರುತ್ತದೆ.
ಇದನ್ನೂ ಓದಿ:- ಪಾಕ್ ಪ್ರಧಾನಿ ಶೆಹಬಾಜ್ ಷರೀಷ್‌ಗೆ ಚಳಿ ಜ್ವರ: ಆಸ್ಪತ್ರೆಗೆ ದಾಖಲು
ಒಳ್ಳೆಯ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ವಿಶ್ವಾಸ ಇದೆ. ಅಗತ್ಯ ಬಿದ್ದರೆ ಯುದ್ದ ಘೋಷಣೆ ಮಾಡಲಿ ಎಂದು ಹೇಳಿದರು.





