ಮೈಸೂರು ನಗರ

ಪಾಕ್‌ ವಿರುದ್ಧ ಕೇಂದ್ರ ಸರ್ಕಾರದ ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲ: ಶಾಸಕ ಹರೀಶ್‌ ಗೌಡ

ಮೈಸೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಸಭೆ ಮಾಡುತ್ತಿದ್ದು, ಕೇಂದ್ರದ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಸಂಬಂಧ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ಉಗ್ರರ ದಾಳಿಯನ್ನು ಭಾರತೀಯರಾದ ಎಲ್ಲರೂ ಖಂಡಿಸಲೇಬೇಕು. ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಪಾಕಿಸ್ತಾನದ ಮೇಲೆ ಯುದ್ಧ ಘೋಷಣೆ ಮಾಡಬೇಕಾ ಬೇಡವಾ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸರ್ಕಾರ‌ ಮಹತ್ವದ ಸಂಪುಟ ಸಭೆ ಕರೆದಿದೆ.

ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಭಾರತೀಯತೆ ವಿಚಾರ ಬಂದಾಗ ನಾವೆಲ್ಲಾ ಒಂದಾಗಿ ಒಗ್ಗಟ್ಟು ಪ್ರದರ್ಶನ ಮಾಡಲೇಬೇಕು. ಉಗ್ರರ ಅಟ್ಟಹಾಸವನ್ನು ಮಟ್ಟ ಹಾಕಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ರಾಜ್ಯ ಸರ್ಕಾರಗಳ ಬೆಂಬಲ ಇದ್ದೇ ಇರುತ್ತದೆ.

ಇದನ್ನೂ ಓದಿ:-  ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಷ್‌ಗೆ ಚಳಿ ಜ್ವರ: ಆಸ್ಪತ್ರೆಗೆ ದಾಖಲು

ಒಳ್ಳೆಯ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ವಿಶ್ವಾಸ ಇದೆ. ಅಗತ್ಯ ಬಿದ್ದರೆ ಯುದ್ದ ಘೋಷಣೆ ಮಾಡಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago