ಮೈಸೂರು ನಗರ

ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿ ಮೇಲೆ ಕೈ ತೋರಿಸಿ ಸಿಟ್ಟು ತೋರಿಸಿದ್ದಾರೆ ಅಷ್ಟೇ: ಶಾಸಕ ಹರೀಶ್‌ ಗೌಡ

ಮೈಸೂರು: ಬೆಳಗಾವಿ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್‌ ಗೌಡ ಪ್ರತಿಕ್ರಿಯೆ ನೀಡಿದ್ದು, ಸಿಎಂ ನಡೆ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ. ಮಾಧ್ಯಮಗಳು ತಪ್ಪಾಗಿ ತಿರುಚಿವೆ. ಸಿಎಂ ಅವರು ಪೊಲೀಸ್‌ ಅಧಿಕಾರಿಯ ಮೇಲೆ ಯಾವುದೇ ರೀತಿಯಲ್ಲೂ ಅನುಚಿತವಾಗಿ ನಡೆದುಕೊಂಡಿಲ್ಲ.

ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ: ಸಚಿವ ಜಿ.ಪರಮೇಶ್ವರ್‌

ಸಹಜವಾಗಿ ಒಂದು ಶಿಷ್ಟಾಚಾರ ಸೂಕ್ತ ಭದ್ರತಾ ನಿಯೋಜನೆ ಮಾಡದೆ ಸಮಾವೇಶದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಸಮಾವೇಶಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸುವ ಕೆಲಸವನ್ನ ಮಾಡಿದ್ದರು. ಅದಕ್ಕೆ ಸಿಎಂ ಅವರು ಸಹಜವಾಗಿ ಪೋಲಿಸ್ ಭದ್ರತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.ಕೈ ತೋರಿಸಿ ಪೋಲಿಸ್ ಅಧಿಕಾರಿ ಮೇಲೆ ಸಿಟ್ಟು ತೋರಿಸಿದ್ದಾರೆ. ಕೆಲವು ಮಾಧ್ಯಮಗಳು ಅದನ್ನೇ ತಪ್ಪಾಗಿ ತೋರಿಸಿವೆ. ಆ ಸಂಧರ್ಭದಲ್ಲಿ ಸಹಜವಾಗಿ ಸಿಎಂ ಪ್ರತಿಕ್ರಿಯಿಸಿದ್ದಾರೆ. ಅದೇ ಜಾಗದಲ್ಲಿ ಯಾರೇ ಇದ್ದರೂ ಅದನ್ನೇ ಮಾಡುತ್ತಿದ್ದರು ಎಂದು ಸಿಎಂ ಸಿದ್ದರಾಮಯ್ಯ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

2 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

4 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

4 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

4 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

5 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

5 hours ago