ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್.2ರಲ್ಲಿ ಶಾಸಕ ಕೆ.ಹರೀಶ್ ಗೌಡ ಅವರಿಂದು ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು.
ವಾರದ ಮೊದಲ ದಿನ ಪ್ರತಿ ವಾರವೂ ಒಂದೊಂದು ವಾರ್ಡ್‌ಗೆ ಭೇಟಿ ನೀಡಲಿರುವ ಶಾಸಕ ಹರೀಶ್ ಗೌಡ ಅವರು, ಇಂದು ಬೆಳಿಗ್ಗೆ ವಾರ್ಡ್ ನಂಬರ್ 2ಕ್ಕೆ ಭೇಟಿ ನೀಡಿ ಮಂಚೇಗೌಡನಕೊಪ್ಪಲಿನ ಜನರ ಸಮಸ್ಯೆ ಆಲಿಸಿದರು.
ಉಮಾಮಹೇಶ್ವರಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯು, ಸರ್ಕಾರಿ ಪ್ರೌಢಶಾಲೆಯ ಹಿಂಭಾಗದ ರಸ್ತೆ ಮಾರ್ಗವಾಗಿ ಪ್ರತಿಮ ನ್ಯಾಯಬೆಲೆ ಅಂಗಡಿ, ಮರಿಗೌಡರ ಮನೆ ಮುಂದಿನ ರಸ್ತೆ, ಸಂಗಮ್ ವೃತ್ತದ ಆಟದ ಮೈದಾನದ ಕಡೆ ಸಾಗಿತು. ಬಳಿಕ ಶಾಸಕ ಹರೀಶ್ ಗೌಡ ಅವರು, ಸ್ಥಳದಲ್ಲಿದ್ದ ಸ್ಥಳೀಯ ಒಳಚರಂಡಿಯನ್ನು ಪರಿಶೀಲನೆ ನಡೆಸಿದರು.
ಪ್ರಮುಖ ವೃತ್ತಗಳ ಬಳಿ ಸಾರ್ವಜನಿಕ ಸಭೆ ನಡೆಸಿದ ಅವರು, ಜನರಿಂದ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ವಾರ್ಡ್‌ನಲ್ಲಿ ಯುಜಿಡಿ ಹಳೆಯದಾಗಿದ್ದು, ಅನೇಕ ಸಮಸ್ಯೆಗಳಿರುವ ಬಗ್ಗೆ ಸಾರ್ವಜನಿಕರು ದೂರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…