ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ.
ರಾಜ್ಯ ಬಜೆಟ್ ಹಲಾಲ್ ಬಜೆಟ್ ಎಂದು ಬಿಜೆಪಿ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್ ಸೇಠ್ ಅವರು, ಈ ಬಾರಿಯ ಬಜೆಟ್‌ನಲ್ಲಿ 1% ಅಷ್ಟೇ ಮುಸ್ಲಿಂಮರಿಗೆ ಸಿಕ್ಕಿದೆ. ಇದನ್ನು ಹಲಾಲ್ ಬಜೆಟ್ ಅಂದರೆ ಅರ್ಥ ಇದೆಯಾ ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಮೈಸೂರಿನಲ್ಲಿ 2014ರಲ್ಲಿ ನಡೆದಿರುವ ಪ್ರಕರಣ ನನ್ನ ತಲೆಯಲ್ಲಿ ಇಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳುತ್ತಿದ್ದಾರೆ. ಅದು ಸರಿಯಲ್ಲ. ಪ್ರತಾಪ್ ಸಿಂಹ ನನ್ನ ಸ್ನೇಹಿತ, ಆದರೆ ಆತನ ಮಾತು, ನಾಲಿಗೆ ಸ್ವಲ್ಪ ಸರಿಯಲ್ಲ. ಅವನ ಮಾತಿನಿಂದ ಹಲವರಿಗೆ ತೀವ್ರ ನೋವಾಗಿದೆ. ಅದನ್ನು ಕಂಟ್ರೋಲ್ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.





