ಮೈಸೂರು ನಗರ

ಸ್ವಕ್ಷೇತ್ರ ಸುತ್ತಿ ಸ್ಥಳಿಯರ ಸಮಸ್ಯೆ ಆಲಿಸಿದ ಶಾಸಕ ಟಿ.ಎಸ್‌. ಶ್ರೀವತ್ಸ

ಮೈಸೂರು: ಶಾಸಕ ಟಿ.ಎಸ್‌. ಶ್ರೀವತ್ಸ ತಮ್ಮ ಕ್ಷೇತ್ರದ ವಿದ್ಯಾರಣ್ಯಪುರಂ ಭಾಗದಲ್ಲಿ ರೌಂಡ್ಸ್‌ ಹಾಕಿ ಸ್ಥಳೀಯರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಬೆಳಿಗ್ಗೆ ವಾರ್ಡ್‌ ನಂ 61ರ ಸುತ್ತಮುತ್ತ ಅಧಿಕಾರಿಗಳೊಂದಿಗೆ ಪ್ರದಕ್ಷಿಣೆ ಹಾಕಿದ ಶಾಸಕ ಟಿಎಸ್‌ ಶ್ರೀವತ್ಸ, ಸ್ಥಳೀಯರ ಹಲವಾರು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡಿದರು.

ಶಾಸಕರ ಬಳಿ ಸಮಸ್ಯೆ ತೋಡಿಕೊಂಡ ಸ್ಥಳೀಯ ನಿವಾಸಿ ನಿಂಗರಾಜು, ಬೆಳಗಿನ ಸಮಯ ಮಕ್ಕಳು ಕ್ರಿಕೆಟ್‌ ಆಡುವುದರಿಂದ ಅಕ್ಕಪಕ್ಕದ ಮನೆಗಳಿಗೆ ತೊಂದರೆಯಾಗುತ್ತಿದೆ ಹಾಗೂ ರಾತ್ರಿ ಸಮಯ ಪುಂಡ ಹುಡುಗರು ಮದ್ಯಪಾನ ಮಾಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.

ಈ ವೇಳೆ ಅಭಿವೃದ್ದಿ ಅಧಿಕಾರಿ ಮಂಜುನಾಥ್‌ ರೆಡ್ಡಿ, ಇಂಜಿನಿಯರ್‌ ಚೇತನ್‌, ಆರೋಗ್ಯಾಧಿಕಾರಿ ಶಿವಪ್ರಸಾದ್‌, ಶಾಸಕರ ಆಪ್ತ ಸಹಾಯಕ ಆದಿತ್ಯ, ವಾರ್ಡ್‌ ಉಸ್ತುವಾರಿ ಜೋಗಿ ಮಂಜು, ಮಾಜಿ ನಗರ ಪಾಲಿಕೆ ಸದಸ್ಯ ಜಗದೀಶ್‌, ವಾರ್ಡ್‌ ಅಧ್ಯಕ್ಷ ಶಿವಪ್ರಸಾದ್‌, ಶಿವಲಿಂಗ ಸ್ವಾಮಿ, ಕಿಶೋರ್‌, ವಾಸು, ಶ್ರೀಧರ್‌ ಭಟ್‌ ಮುಂತಾದವರು ಇದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

5 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

5 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

11 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

11 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

11 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

11 hours ago