Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿ

mlc da yatheendra

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಇಂಟಿಲಿಜೆನ್ಸ್‌ ಫೇಲ್ಯೂರ್‌ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆಯ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಜನ ಬಂದಿದ್ದಾರೆ. ಹಾಗಾಗಿ ಅಭಿಮಾನಿಗಳನ್ನು ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಆಗಿರುವ ಪ್ರಮಾದವನ್ನು ನಾವು ಒಪ್ಪಿಕೊಳ್ಳುತ್ತೇವೆ. ಇದಕ್ಕಾಗಿ ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶ ಮಾಡಿದ್ದೇವೆ. ಇದರಲ್ಲಿ ಸಿಎಂ ಹಾಗೂ ಡಿಸಿಎಂ ಪಾತ್ರವಿಲ್ಲ. ಆರ್‌ಸಿಬಿ ಮ್ಯಾನೇಜ್ಮೆಂಟ್ ಸಂಭ್ರಮಾಚರಣೆ ಮಾಡಿ ಎಂದು ಮನವಿ ಮಾಡಿದ್ದ ಕಾರಣಕ್ಕಾಗಿ ನಾವು ಒಪ್ಪಿಕೊಂಡಿದ್ದೆವು. ಎರಡು ಕಡೆ ಏಕಕಾಲಕ್ಕೆ ನಿರೀಕ್ಷೆಗೂ ಮೀರಿ ಜನ ಬಂದಿದ್ದರು. ಎಲ್ಲಾ ಜವಾಬ್ದಾರಿಗಳನ್ನು ಪೊಲೀಸರಿಗೆ ಕೊಡಲಾಗಿತ್ತು. ಆದರೂ ಈ ಘಟನೆ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಸರ್ಕಾರದ ಬೇಜಾವಾಬ್ದಾರಿತನದಿಂದ ಸಂಭ್ರಮಾಚರಣೆ ಶೋಕಾಚರಣೆ ಆಯಿತು: ಮಾಜಿ ಸಂಸದ ಪ್ರತಾಪ್‌ ಸಿಂಹ

ಇನ್ನು ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ. ವಿರೋಧ ಪಕ್ಷವಾಗಿ ನಮ್ಮನ್ನು ತಿದ್ದುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಇಂತಹ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಿಲ್ಲ. ವಿಧಾನಸೌಧದಲ್ಲಿ ರಾಜಕಾರಣಿಗಳ ಕುಟುಂಬಕ್ಕಾಗಿ ಕಾರ್ಯಕ್ರಮ ಮಾಡಿದ್ದಾರೆ ಎಂಬುದು ಸರಿಯಲ್ಲ. ಹೆಚ್ಚು ಜನ ಸೇರೋದು ಸ್ಟೇಡಿಯಂನಲ್ಲಿ. ಅಲ್ಲಿ ಈ ಘಟನೆ ಆಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.

Tags:
error: Content is protected !!