Mysore
16
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಕರ್ನಾಟಕದ ರಾಜಕೀಯದಲ್ಲೀಗ ನೆಪೋಟಿಸಂ: ಎಂಎಲ್‌ಸಿ ವಿಶ್ವನಾಥ್‌ ಗಂಭೀರ ಆರೋಪ

ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು, ರಾಜಕೀಯ ಗಣ್ಯ ನಾಯಕರು ತಮ್ಮ ತಮ್ಮ ಮಕ್ಕಳನ್ನು ಮುಂದೆ ತರಬೇಕು ಎಂದು ಪಣತೊಟ್ಟಿದ್ದಾರೆ. ಇದರಲ್ಲಿ ಪ್ರಮುಖವಾಗಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಇದ್ದಾರೆ. ಈ ನಾಯಕರಿಗೆ ರಾಜ್ಯದ ಹಿತಾಸಕ್ತಿಗಿಂತ ಅವರ ಕೌಟುಂಬಿಕ ಹಿತಾಸಕ್ತಿಯೇ ಮುಖ್ಯ ಎಂದು ವ್ಯಂಗ್ಯವಾಡಿದರು.

ಇವೆರೆಲ್ಲಾ ಜನರ ಕಷ್ಟಗಳಿಗೆ ಸ್ಪಂದಿಸದೇ, ಜನರ ಏಳಿಗೆಗಾಗಿ ಕೆಲಸ ಮಾಡದೇ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈಗ ನಡೆಯುತ್ತಿರುವ ಎರಡು ಯಾತ್ರೆಗಳಿಂದ ಜನರಿಗೆ ಏನು ಅನುಕೂಲವಿಲ್ಲ.  ಆ ಯಾತ್ರೆ ಮಾಡುವುದನ್ನು ಬಿಟ್ಟು ಹಳ್ಳಿ ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದರೆ, ಎಷ್ಟೆಲ್ಲಾ ಪ್ರಯೋಜನವಾಗುತ್ತಿತ್ತು ಎಂದು ಪ್ರಶ್ನೆ ಮಾಡಿದರು.

ಇನ್ನೂ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನವರು ಮೂರು ಬಿಟ್ಟವರಂತೆ ವರ್ತಿಸುತ್ತಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಅವರು ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಿಡಿಕಾರಿದರು.

Tags:
error: Content is protected !!