ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್ ಅವರು, ರಾಜಕೀಯ ಗಣ್ಯ ನಾಯಕರು ತಮ್ಮ ತಮ್ಮ ಮಕ್ಕಳನ್ನು ಮುಂದೆ ತರಬೇಕು ಎಂದು ಪಣತೊಟ್ಟಿದ್ದಾರೆ. ಇದರಲ್ಲಿ ಪ್ರಮುಖವಾಗಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಇದ್ದಾರೆ. ಈ ನಾಯಕರಿಗೆ ರಾಜ್ಯದ ಹಿತಾಸಕ್ತಿಗಿಂತ ಅವರ ಕೌಟುಂಬಿಕ ಹಿತಾಸಕ್ತಿಯೇ ಮುಖ್ಯ ಎಂದು ವ್ಯಂಗ್ಯವಾಡಿದರು.
ಇವೆರೆಲ್ಲಾ ಜನರ ಕಷ್ಟಗಳಿಗೆ ಸ್ಪಂದಿಸದೇ, ಜನರ ಏಳಿಗೆಗಾಗಿ ಕೆಲಸ ಮಾಡದೇ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈಗ ನಡೆಯುತ್ತಿರುವ ಎರಡು ಯಾತ್ರೆಗಳಿಂದ ಜನರಿಗೆ ಏನು ಅನುಕೂಲವಿಲ್ಲ. ಆ ಯಾತ್ರೆ ಮಾಡುವುದನ್ನು ಬಿಟ್ಟು ಹಳ್ಳಿ ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದರೆ, ಎಷ್ಟೆಲ್ಲಾ ಪ್ರಯೋಜನವಾಗುತ್ತಿತ್ತು ಎಂದು ಪ್ರಶ್ನೆ ಮಾಡಿದರು.
ಇನ್ನೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನವರು ಮೂರು ಬಿಟ್ಟವರಂತೆ ವರ್ತಿಸುತ್ತಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಅವರು ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಿಡಿಕಾರಿದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…