ಮೈಸೂರು ನಗರ

ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲು ಎಂಎಲ್ಸಿ ಎಚ್.ವಿಶ್ವನಾಥ್ ಆಗ್ರಹ

ಮೈಸೂರು : ಮುಡಾದಲ್ಲಿ ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಈಗಾಗಿ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು, ಇಲ್ಲದಿದ್ದರೆ ಹಳ್ಳ ಹಿಡಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಳ್ಳಿಹಕ್ಕಿ,  ಐಎಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ವರದಿ ಬರುವುದಕ್ಕೂ ಮೊದಲೇ ಮುಡಾ ಅಧ್ಯಕ್ಷ ಮರಿಗೌಡ , ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಸಮರ್ಥಿಸಿಕೊಳ್ಳುತ್ತಿದ್ದಾರೆ.  ತನಿಖೆ ಸಂಸ್ಥೆ ಮೇಲೆ ಗೌರವ ಇಲ್ವಾ..? ಮಹದೇಪ್ಪ ಒಬ್ಬ ಕ್ಯಾಬಿನೆಟ್‌ ಮಿನಿಸ್ಟರ್‌ ಆಗಿ ಈ ರೀತಿ ಹೇಳಿದ್ರೆ ತನಿಖೆ ಯಾವ ರೀತಿ ಮಾಡಬೇಕು. ನೀವು ಮತ್ತು ನಿಮ್ಮ ಕಾಂಗ್ರೆಸ್‌ ಶಾಸಕರು ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅನಾವಶ್ಯಕವಾಗಿ ಮಾತಾಡೋದನ್ನ ಮೊದಲು ನಿಲ್ಲಿಸಿ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೆ ಮುಡಾ ಅಧ್ಯಕ್ಷ ಮರಿಗೌಡ ಅವನೊಬ್ಬ ದೊಡ್ಡ ಮೂಡ. ಅವನು ನನ್ನ ನೈತಿಕತೆ ಬಗ್ಗೆ ಏನು ಮಾತನಾಡೋದು. ಅದಕ್ಕೆ ಈ ಪ್ರಕರಣ ಸಿಬಿಐಗೆ ವಹಿಸಬೇಕು. ಇಲ್ಲ ಅಂದರೆ ಹಳ್ಳ ಹಿಡಿಸಿ ಬಿಡ್ತಾರೆ. ದಲಿತರ ಭೂಮಿ ಖರೀದಿ ಮಾಡಿ ಮೋಸ ಮಾಡುತ್ತಿದ್ದೀರಾ. ನೀವು ಒಬ್ಬ ಸಮಾಜವಾದಿ ಆದರೆ, ಆ ನಿವೇಶನ ಅವರಿಗೆ ವಾಪಸ್‌ ಮಾಡಿ. ಸುಮಾರು ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

37 seconds ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

17 mins ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

19 mins ago

ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರು ಹತ್ಯೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…

40 mins ago

ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್‌ಲೈನ್‌ ಡೆಲಿವರಿ ಬಾಯ್ಸ್‌ ವೇಷದಲ್ಲಿ…

52 mins ago

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ ಕಾಮಗಾರಿ ಶುರು

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…

1 hour ago