Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಚಾಮುಂಡಿಬೆಟ್ಟದಲ್ಲಿ ದರ್ಶನದ ವೇಳೆ ಮೊಬೈಲ್‌ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್‌ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ್ದು, ಚಾಮುಂಡಿಬೆಟ್ಟದ ಅಭಿವೃದ್ಧಿಗಾಗಿ ಟಾಸ್ಕ್‌ಫೋರ್ಸ್‌ ರಚನೆ ಮಾಡಲು ಮುಂದಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಪ್ಲಾಸ್ಟಿಕ್‌ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನದ ವೇಳೆ ಮೊಬೈಲ್‌ ನಿಷೇಧ ಮಾಡಲಾಗಿದೆ. ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಬೆಟ್ಟದಲ್ಲಿ ಸುರಕ್ಷತೆಗೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಚಾಮುಂಡಿಬೆಟ್ಟಕ್ಕೆ ಸಾವಿರಾರು ಜನ ಬರುತ್ತಾರೆ. ಆದ್ದರಿಂದ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಬಾಕಿಯಿರುವ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರ ಪ್ರಸಾದ ಯೋಜನೆ ಜಾರಿ ಮಾಡಲಾಗುತ್ತದೆ. ಈ ಮೂಲಕ ದಾಸೋಹ ಭವನದಲ್ಲಿ ಊಟದ ವ್ಯವಸ್ಥೆ ಸುಧಾರಣೆ ಮಾಡಲಾಗುತ್ತದೆ. ರುಚಿಕರ ಊಟ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Tags: