Mysore
21
broken clouds

Social Media

ಸೋಮವಾರ, 15 ಜೂನ್ 2026
Light
Dark

ಮೈಸೂರು ರಾಜಮನೆತನಕ್ಕೆ ರಾಯಲ್‌ ಸ್ಟೇಟಸ್‌ ನೀಡಬೇಕು: ಸಂಸದ ಡಾ.ಸಿ.ಎನ್.ಮಂಜುನಾಥ್‌

ಮೈಸೂರು: ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರ ರಾಯಲ್‌ ಸ್ಟೇಟಸ್‌ ನೀಡಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್‌ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ಹಾಗೂ ಆಡಳಿತ ಅದರ ಪಾಡಿಗೆ ಅದು ನಡೆಯಲಿ. ಆದರೆ ರಾಜಮನೆತನಕ್ಕೆ ಗೌರವ ಸಲ್ಲಿಸುವ ವ್ಯವಸ್ಥೆ ಆಗಬೇಕು ಎಂದರು.

ಕೆಲ ದೇಶಗಳಲ್ಲಿ ರಾಜಮನೆತನಕ್ಕೆ ಉನ್ನತ ಸ್ಥಾನ ನೀಡಲಾಗಿದೆ. ರಾಜರ ವಿಶೇಷ ಸ್ಥಾನಮಾನ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಆದರೆ ನಮ್ಮ ರಾಜ್ಯ ಹಾಗೂ ದೇಶದಲ್ಲಿ ಅವರನ್ನು ಗೌರವಿಸುವ ದೊಡ್ಡ ಹೃದಯಗಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಶೇಕಡಾ 5 ರಿಂದ ಶೇಕಡಾ 6ರಷ್ಟು ಆರೋಗ್ಯ ಕ್ಷೇತ್ರಕ್ಕೆ ವೆಚ್ಚ ಮಾಡಲಾಗುತ್ತಿತ್ತು. ಶಿಕ್ಷಣ, ಆರೋಗ್ಯ ಮತ್ತು ಇತರೆ ಕ್ಷೇತ್ರಗಳಿಗೆ ಅನೇಕ ಕೊಡುಗೆ ನೀಡಿದ ಅರಸು ಮನೆತನಕ್ಕೆ ನಮ್ಮ ರಾಜ್ಯದಲ್ಲಾದರೂ ವಿಶೇಷ ಸ್ಥಾನಮಾನ ದೊರೆಯಲಿ ಎಂದರು.

Tags:
error: Content is protected !!