ಮೈಸೂರು: ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರ ರಾಯಲ್ ಸ್ಟೇಟಸ್ ನೀಡಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ಹಾಗೂ ಆಡಳಿತ ಅದರ ಪಾಡಿಗೆ ಅದು ನಡೆಯಲಿ. ಆದರೆ ರಾಜಮನೆತನಕ್ಕೆ ಗೌರವ ಸಲ್ಲಿಸುವ ವ್ಯವಸ್ಥೆ ಆಗಬೇಕು ಎಂದರು.
ಕೆಲ ದೇಶಗಳಲ್ಲಿ ರಾಜಮನೆತನಕ್ಕೆ ಉನ್ನತ ಸ್ಥಾನ ನೀಡಲಾಗಿದೆ. ರಾಜರ ವಿಶೇಷ ಸ್ಥಾನಮಾನ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಆದರೆ ನಮ್ಮ ರಾಜ್ಯ ಹಾಗೂ ದೇಶದಲ್ಲಿ ಅವರನ್ನು ಗೌರವಿಸುವ ದೊಡ್ಡ ಹೃದಯಗಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಶೇಕಡಾ 5 ರಿಂದ ಶೇಕಡಾ 6ರಷ್ಟು ಆರೋಗ್ಯ ಕ್ಷೇತ್ರಕ್ಕೆ ವೆಚ್ಚ ಮಾಡಲಾಗುತ್ತಿತ್ತು. ಶಿಕ್ಷಣ, ಆರೋಗ್ಯ ಮತ್ತು ಇತರೆ ಕ್ಷೇತ್ರಗಳಿಗೆ ಅನೇಕ ಕೊಡುಗೆ ನೀಡಿದ ಅರಸು ಮನೆತನಕ್ಕೆ ನಮ್ಮ ರಾಜ್ಯದಲ್ಲಾದರೂ ವಿಶೇಷ ಸ್ಥಾನಮಾನ ದೊರೆಯಲಿ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…