ಮೈಸೂರು: ಇಸ್ರೋ ಸಂಸ್ಥೆ ಹಾಗೂ ಯುರೋಪಿನ್ ಬಾಹ್ಯಾಕಾಶ ಸಂಸ್ಥೆಯೂ ಜಂಟಿಯಾಗಿ ಪ್ರೋಬಾ-3 ನೌಕೆಯನ್ನು ನಭಕ್ಕೆ ಯಶಸ್ವಿಯಾಗಿ ಹಾರಿಸಿರುವುದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತೀಯ ಬಾಹ್ಯಾಕಾಶ ಕೇಂದ್ರ(ಇಸ್ರೋ) ಹಾಗೂ ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ (ಇಎಸ್ಎ) ಜಂಟಿಯಾಗಿ ಪ್ರೋಬಾ-3 ನೌಕೆಯನ್ನು ನಭಕ್ಕೆ ಯಶಸ್ವಿಯಾಗಿ ಹಾರಿಸಿದೆ. ಪಿಎಸ್ಎಲ್ವಿ-ಸಿ60 ರಾಕೆಟ್ 220ಕೆ.ಜಿ ತೂಕದ ಎರಡು ಸ್ಪೇಡೆಕ್ಸ್ ಉಪಗ್ರಹ ಮತ್ತು 24 ಪೇಲೋಡ್ಗಳನ್ನು ಹೊಂದಿರುವ ಪಿಒಇಎಂ-4 ಅನ್ನು ನಿಗದಿತ ಕಕ್ಷೆಗೆ ಸೇರಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಕಕ್ಷೆಯಲ್ಲಿ ಬಾಹ್ಯಾಕಾಶ ನೌಕೆಗಳ ‘ಡಾಕಿಂಗ್’ ಮತ್ತು ‘ಅನ್ಡಾಕಿಂಗ್’ ನಡೆಸುವ ಸಾಮರ್ಥ್ಯವನ್ನು ಪ್ರದರ್ಶಿಸುವ ಮಹತ್ತರ ಯೋಜನೆ ಇದಾಗಿದೆ. ಅಮೆರಿಕ, ರಷ್ಯಾ ಮತ್ತು ಚೀನಾ ಮಾತ್ರ ಬಾಹ್ಯಾಕಾಶ ನೌಕೆಗಳ ‘ಡಾಕಿಂಗ್’ ತಂತ್ರಜ್ಞಾನವನ್ನು ಹೊಂದಿರುವ ದೇಶಗಳಾಗಿವೆ. ಈ ಸಾಲಿಗೆ ಇಂದು ಭಾರತವು ಸೇರ್ಪಡೆಯಾಗಲಿರುವುದು ನಮ್ಮ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…